More

    ಪಟ್ಟಣದ ಜನರಿಗೆ ಮೂಲಸೌಲಭ್ಯ ಕಲ್ಪಿಸಿ

    ಮಾನ್ವಿ: ಪಟ್ಟಣದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ಎನ್.ಎಸ್.ಬೋಸರಾಜು ಪುರಸಭೆ ಮುಖ್ಯಾಧಿಕಾರಿ ಗಂಗಾಧರಗೆ ಸೂಚಿಸಿದರು.

    ಇದನ್ನೂ ಓದಿರಿ: ಗೃಹಸಚಿವ ಡಾ. ಜಿ. ಪರಮೇಶ್ವರ ಸೂಚನೆ; ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಶ್ರಮಿಸಿ

    ಪಟ್ಟಣದಲ್ಲಿ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಕಚೇರಿ ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿ. ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ಪಟ್ಟಣಕ್ಕೆ ಕುಡಿಯುವ ನೀರನ್ನು ಪೂರೈಕೆ ಮಾಡುವ ರಬ್ಬಣಕಲ್‌ಲ್ ಕುಡಿಯುವ ನೀರು ಶುದ್ದಿಕರಣ ಘಟಕ ಹಾಗೂ ಕಾತರಕಿ ಗ್ರಾಮದ ಹತ್ತಿರದ ತುಂಗಭದ್ರ ನದಿಗೆ ಕೂಡಿಸಿರುವ ಜಾಕ್ ವೆಲ್‌ಗೆ ನಿರಂತರ ವಿದ್ಯುತ್ ಸರಬರಾಜು

    ಮಾಡಲು ಪ್ರತ್ಯೆಕವಾದ ವಿದ್ಯುತ್ ಸಂಪರ್ಕ ನೀಡಲು ಅಂದಾಜು ಪಟ್ಟಿ ತಯಾರಿಸುವಂತೆ ಹೇಳಿದರು. ಪುರಸಭೆ ಸದಸ್ಯರು ವಾರ್ಡ್‌ಗಳಿಗೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.

    ನಂತರ ಪಟ್ಟಣದ ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮೆನುವಿನ ಪ್ರಕಾರ ಶುಚಿಯಾದ ಊಟ ನೀಡುವ ಬಗ್ಗೆ ಪರಿಶೀಲನೆ ನಡೆಸಿ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ಆಹಾರ ಪೂರೈಸಬೇಕು ಎಂದು ತಿಳಿಸಿದರು.

    ತಾಪಂ ಇಓ ಎಂ.ಡಿ. ಸೈಯಾದ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಪೂರ್‌ಸಾಬ್, ಮುಖಂಡರಾದ ಬಾಲಸ್ವಾಮಿ ಕೊಡ್ಲಿ, ರಾಜಾ ವಸಂತನಾಯಕ, ಶೇಖ ಸತ್ತರ್ ಬಂಗ್ಲೆವಾಲೆ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts