More

    ಬಿತ್ತನೆ ಬೀಜ, ಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಿರಲಿ; ಅಧಿಕಾರಿಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಸೂಚನೆ


    ತ್ರೈಮಾಸಿಕ ಕೆಡಿಪಿ ಸಭೆ

    ಮಾನ್ವಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ ಹೆಚ್ಚಿನ ದರಕ್ಕೆ ಮಾರಾಟ ಹಾಗೂ ಕಳಪೆ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಸೂಚಿಸಿದರು.

    ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ 1048 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದ್ದು, 748 ಕ್ವಿಂ. ಬಿತ್ತನೆ ಬೀಜ ಮಾರಾಟವಾಗಿದೆ. 10 ಸಾವಿರ ಟನ್ ರಸಗೊಬ್ಬರ ದಾಸ್ತಾನು ಇದೆ. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೊರೈಕೆಯಲ್ಲಿ ಸಮಸ್ಯೆಯಾಗುವುದಿಲ್ಲ ಎಂದು ಕೃಷಿ ಅಧಿಕಾರಿ ಹುಸೇನ್ ಸಾಹೇಬ್ ತಿಳಿಸಿದರು. ಕೆಡಿಪಿ ಸಭೆಗೆ ಗೈರಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸಿಇಒಗೆ ವರದಿ ಸಲ್ಲಿಸುವಂತೆ ತಾಪಂ ಇಒ ಅಣ್ಣರಾವ್‌ಗೆ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts