More

    ನದಾಫ್ ಅಭಿವೃದ್ಧಿ ನಿಗಮ ಸ್ಥಾಪಿಸಿ

    ಮಾನ್ವಿ: ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ನದಾಫ್ (ಪಿಂಜಾರ್) ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತಗೆ ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ತಾಲೂಕು ಘಟಕದ ಪ್ರಮುಖರು ಶುಕ್ರವಾರ ಮನವಿ ಸಲ್ಲಿಸಿದರು.

    ನದಾಫ್ ಸಮುದಾಯ ಹತ್ತಿ ಉತ್ಪನ್ನ ತಯಾರಿಸುವ ಜಾಗತಿ ವೃತ್ತಿಯಲ್ಲಿ ಹೆಚ್ಚು ತೊಡಗಿದೆ. ಸಮುದಾಯದವರು ಕೊಳೆಗೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದು, ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ರಾಜ್ಯದಲ್ಲಿ ಸಹ ಕೂಡಲೇ ಸರ್ಕಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ತಾಲೂಕು ಅಧ್ಯಕ್ಷ ಹಬೀಬ್‌ಸಾಬ್, ಪ್ರಮುಖರಾದ ಮೊಹ್ಮದ್ ಇಸ್ಮಾಯಿಲ್ ಸಾಬ್, ಖಾಸೀಂ ಸಾಬ್, ರಾಜು ಮೇಸ್ತ್ರೀ ಪೋತ್ನಾಳ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts