More

    ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಲಿ, ಸೀಮಂತ ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಹೇಶ ಕಿವಿಮಾತು

    ಮಾನ್ವಿ: ಗರ್ಭಿಣಿಯರು ತಪ್ಪದೇ ಪೌಷ್ಟಿಕ ಆಹಾರ ಸೇವಿಸಲಿ ಎಂದು ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಹೇಶ ಕಿವಿಮಾತು ಹೇಳಿದರು.


    ತಾಲೂಕಿನ ನೀರಮಾನ್ವಿ ಗ್ರಾಮದ ಅಂಗನವಾಡಿ ಕೇಂದ್ರ 3ರಲ್ಲಿ ಸಮುದಾಯ ಆಧಾರಿತ ಚಟುವಟಿಕೆ ಪೋಷಣ್ ಅಭಿಯಾನ ಕಾರ್ಯಕ್ರಮ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗರ್ಭಿಣಿಯರಿಗಾಗಿ ಶನಿವಾರ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗರ್ಭಿಣಿ ಆಗಿರುವಾಗ ಸಮಯಕ್ಕೆ ಸರಿಯಾಗಿ ತಮ್ಮ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

    ಇಲಾಖೆಯ ಮೇಲ್ವಿಚಾರಕಿ ಶಾಹೀನಾ ಬಾನು ಮಾತನಾಡಿ, ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ರಕ್ತಹೀನತೆ ಮತ್ತು ಆಪೌಷ್ಟಿಕತೆಯಂತಹ ತೊಂದರೆಗಳನ್ನು ದೊರ ಮಾಡಲು ಪೌಷ್ಟಿಕವಾದ ಆಹಾರ ಸೇವನೆ ಅತಿ ಮುಖ್ಯ ಎಂದರು.

    ಕಾರ್ಯಕ್ರಮದಲ್ಲಿ ಅನೇಕ ಗರ್ಭಿಣಿಯರಿಗೆ ಸೀಮಂತ ನಡೆಸಲಾಯಿತು. ಮೇಲ್ವಿಚಾರಕಿಯರಾದ ಪಾರ್ವತಿ, ನಾಗರತ್ನಮ್ಮ, ರಾಧಾಬಾಯಿ, ಅಂಗನವಾಡಿ ಕಾರ್ಯಕರ್ತೆಯರಾದ ಅಮರಮ್ಮ, ಹಂಪಮ್ಮ, ಆಶಾ ಕಾರ್ಯಕರ್ತೆ ಅನುರಾಧ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts