More

    ವೈಜ್ಞಾನಿಕ ಕೃಷಿಯಿಂದ ಆದಾಯ ದ್ವಿಗುಣ

    ಮಾನ್ವಿ: ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಯೋಜನೆಗಳ ಸದುಪಯೋಗದ ಜತೆಗೆ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಆದಾಯ ದ್ವಿಗುಣಗೊಳ್ಳುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ಸಾಹೇಬ್ ಹೇಳಿದರು.

    ಪಟ್ಟಣದ ಕೃಷಿ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ಆತ್ಮ ಯೋಜನೆಯಡಿ ರೈತರ ದಿನಾಚರಣೆ ಅಂಗವಾಗಿ ನಡೆದ ಕಿಸಾನ್ ಗೋಷ್ಠಿ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈತರು ಕೇವಲ ಸಾಂಪ್ರದಾಯಿಕ ಕೃಷಿಗೆ ಮಾರುಹೋಗದೆ ಜಾನುವಾರು-ಜೇನು ಸಾಕಣೆ, ತೋಟಗಾರಿಕೆ ಹೀಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಹೆಚ್ಚಿನ ಆದಾಯ ಪಡೆದುಕೊಳ್ಳಬಹುದು ಎಂದರು.

    ಬೆಳೆ ನಷ್ಟವಾದಾಗ ಕೃಷಿ ವಿಮೆಯಿಂದ ಸುರಕ್ಷೆ ಪಡೆಯಬಹುದು. ಗ್ರಾಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಮಾಹಿತಿ ಪಡೆದು ಎಲ್ಲರೂ ಬೆಳೆ ವಿಮೆ ಮಾಡಿಸಬೇಕು ಎಂದು ತಿಳಿಸಿದರು.
    ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಹಿರಿಯ ಸಂಶೋಧನ ವಿಜ್ಞಾನಿ ಚೈತ್ರಾ ವಂದಾಲಿ ಮಾತನಾಡಿ, ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಕೃಷಿ ವೆಚ್ಚ ಕಡಿಮೆಯಾಗಿ ಅಧಿಕ ಇಳುವರಿ ಪಡೆಯಬಹುದಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts