More

    ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್

    ಮಾನ್ವಿ: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವಲ್ಲಿ ಹಾಗೂ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿ ಎಂದು ಗಾಂಧಿ ಕಾಲೇಜಿನ ಆಡಳಿತಾಧಿಕಾರಿ ರಾಮಲಿಂಗಪ್ಪ ಹೇಳಿದರು.

    ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳವಾರ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಬಿರಗಳು ಗ್ರಾಮೀಣ ಜನರಿಗೆ ಸ್ವಚ್ಛತೆ ಮತ್ತು ಪರಿಸರ ಕುರಿತು ಜಾಗೃತಿ ಮೂಡಿಸಿದಂತಾಗುತ್ತದೆ. ನಮ್ಮ ಗ್ರಾಮಗಳ ಸ್ವಚ್ಛತೆಗೆ ಎಲ್ಲರೂ ಮುಂದಾಗಬೇಕು ಎಂದರು.

    ಮಾಡಗಿರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಚನ್ನವೀರಯ್ಯ ಮಾತನಾಡಿ, ಎನ್ನೆಸ್ಸೆಸ್ ಶಿಬಿರಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗೆ ಸಾಕ್ಷಿಯಾಗುತ್ತದೆ. ಸೇವಾಭಾವನೆಯಿಂದ ನಾವು ಮಾಡುವ ಸಣ್ಣ ಕೆಲಸ ಇಡೀ ದೇಶದ ಚಿತ್ರಣವನ್ನೇ ಬದಲಿಸುತ್ತದೆ ಎಂದು ತಿಳಿಸಿದರು.

    ಕಾಲೇಜಿನ ಪ್ರಾಚಾರ್ಯ ಈರಣ್ಣ ಮರ್ಲಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಮಂಜುನಾಥ್ ಕರಡಿಗುಡ್ಡ ಪ್ರತಿಜ್ಞಾವಿಧಿ ಬೋಧೀಸಿದರು. ಪ್ರಮುಖರಾದ ದೇವೇಂದ್ರ ಕುಮಾರ್ ಹೂಗಾರ್, ಶಿವಗಂಗಮ್ಮ, ವಿರೂಪಾಕ್ಷಯ್ಯ ಸ್ವಾಮಿ, ದೇವರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts