More

    ಉತ್ತಮ ಪ್ರಜೆಗಳ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯ; ಬಿವಿಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ವಿ.ರಡ್ಡಿ ವ್ಯಾಖ್ಯಾನ

    ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

    ಮಾನ್ವಿ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನ ದೇಶದ ಒಳ್ಳೆಯ ಪ್ರಜೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಬಿವಿಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ವಿ.ರಡ್ಡಿ ತಿಳಿಸಿದರು.

    ಪಟ್ಟಣದ ಬಿವಿಆರ್ ಶಾಲೆಯಲ್ಲಿ ಭಾನುವಾರ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ರಾಮಲಿಂಗಪ್ಪನವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದುಳಿದ ಪ್ರದೇಶವನ್ನು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಗೆ ತರುವ ಶಿಕ್ಷಕರ ವೃತ್ತಿ ಬಹಳ ಮಹತ್ವದಾಗಿದೆ. ಮಾಜಿ ಉಪ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಆಚರಿಸುವುದು ಗೌರವ ತಂದಿದೆ ಎಂದರು.

    ಇತೀಚಿನ ದಿನಗಳಲ್ಲಿ ಶಿಕ್ಷಕರ ಶ್ರಮದಿಂದ ಕಲ್ಯಾಣ ಕರ್ನಾಟಕ ಮತ್ತು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದರ ಶ್ರಮ ಶಿಕ್ಷಕರಿಗೆ ಸಲ್ಲುತ್ತದೆ. ನಮ್ಮ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಮತ್ತು ದೊಡ್ಡ ಹುದ್ದೇಗಳಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಬೇಕಾಗಿದೆ ಎಂದರು.

    ನಿವೃತ್ತ ಮುಖ್ಯೋಪಾಧ್ಯಾಯ ರಾಮಲಿಂಗಪ್ಪ ಮಾತನಾಡಿ, ಶಿಕ್ಷಕರ ದಿನಾಚರಣೆಯಂದು ನನ್ನನ್ನು ಗೌರವಿಸಿರುವುದು ಸಂತಸ ತಂದಿದೆ. ಶಿಕ್ಷಕರು ಸಮಾಜವನ್ನು ತಿದ್ದುವಲ್ಲಿ ನಮ್ಮ ಪಾತ್ರ ಮಹತ್ವದ್ದಾಗಿದೆ. ಗುರುವಿನ ಸ್ಥಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಬಿವಿಆರ್ ಶಾಲೆಯ ಶಾಲೆಯ ಮುಖ್ಯೋಪಾಧ್ಯಾಯರಾದ ಸರ್ಮತ್‌ಖಾನ್ ಶಿಕ್ಷಕರರಾದ ಉಡುಪಿಕೃಷ್ಣ, ವಾಜೇಂದ್ರ ದಿಗ್ಗಾವಿ, ನಾಮದೇವ, ನಾಗಜ್ಯೋತಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts