More

    ತೃತೀಯ ಲಿಂಗಿಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ದಲಿತ ಸಮರ ಸೇನೆ ಒತ್ತಾಯ

    ಮಾನ್ವಿ: ಪಟ್ಟಣದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಜನರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಪುರಸಭೆಯಿಂದ ಬಸವ ವೃತ್ತದವರೆಗೆ ದಲಿತ ಸಮರ ಸೇನೆ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು.

    ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ವಾಸಿಸುವ ಸ್ಲಂ ಪ್ರದೇಶದ ಜನರಿಗೆ ಹೆಚ್ಚುವರಿ ಭೂಮಿ ಮಂಜೂರು ಮಾಡಿ ಹಕ್ಕುಪತ್ರಗಳ ವಿತರಣೆ ಮಾಡಬೇಕು. ಶುದ್ಧ್ದ ಕುಡಿವ ನೀರು, ರಸ್ತೆ, ಚರಂಡಿ, ವಿದ್ಯುದ್ದೀಪ, ಶೌಚಗೃಹ ಸೇರಿದಂತೆ ಇತರ ಮೂಲ ಸವಲತ್ತುಗಳನ್ನು ಒದಗಿಸಬೇಕು. ಸಾಮಾಜಿಕವಾಗಿ ವಿವಿಧ ರೀತಿಯ ತೊಂದರೆಗಳನ್ನು ಹಾಗೂ ಅವಮಾನಗಳನ್ನು ಅನುಭವಿಸುತ್ತಿರುವ ತೃತೀಯ ಲಿಂಗಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಡಿಎಸ್‌ಎಸ್ ಜಿಲ್ಲಾಧ್ಯಕ್ಷ ನೀಲಕಂಠ (ಅನಿಲ್) ತಾಲೂಕು ಅಧ್ಯಕ್ಷ ಅನಿಲ್‌ಕುಮಾರ, ಸಂಘಟನಾ ಸಂಚಾಲಕ ಕರಿಯಪ್ಪ, ಮಹಿಳಾ ಘಟಕ ಅಧ್ಯಕ್ಷೆ ಹನುಮಂತಿ, ಸಂಚಾಲಕಿ ಶಿವಬಸ್ಸಮ್ಮ ಸೇರಿದಂತೆ 9ನೇ ವಾರ್ಡ್‌ನ ನೂರಾರು ಮಹಿಳೆಯರು, ತೃತೀಯ ಲಿಂಗಿಗಳು ಹಾಗೂ ಸಂಘಟಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts