ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

01042023 Manavi election officer v prakash
Published on

ಮಾನ್ವಿ: ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿ.ಪ್ರಕಾಶ ತಿಳಿಸಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಏ.20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏ.21 ರಂದು ನಾಮಪತ್ರಗಳನ್ನು ಪರಿಶೀಲನೆ ಮಾಡಲಾಗುವುದು. ಏ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಏಣಿಕೆ ನಡೆಯಲಿದೆ ಎಂದರು.

ಕ್ಷೇತ್ರದಲ್ಲಿ 1,12,956 ಪುರುಷ ಹಾಗೂ 1,17,703 ಮಹಿಳೆಯರು ಮತ್ತು 64 ತೃತೀಯ ಲಿಂಗಿಗಳು ಸೇರಿ ಒಟ್ಟು 2,30,723 ಮತದಾರರಿದ್ದಾರೆ. ನಾಮಪತ್ರ ಸ್ವೀಕೃತಿಯ ಕೊನೆಯ ದಿನದವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದು ಹಾಕಲು ಅವಕಾಶ ಇದೆ.

ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿ 276 ಮತಗಟ್ಟೆಗಳಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. 47 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದ್ದು ಹೆಚ್ಚಿನ ಭದ್ರತೆ ಕೈಗೊಳ್ಳಲಾಗುವುದು. ಕವಿತಾಳ, ದೇವದುರ್ಗ ಕ್ರಾಸ್, ರಾಯಚೂರು ಸಂಪರ್ಕ ರಸ್ತೆಯಲ್ಲಿ ಚೆಕ್ ಪೋಸ್ಟ್‌ಗಳನ್ನು ಆರಂಭಿಸಿ ಕ್ಷೇತ್ರಕ್ಕೆ ಅಕ್ರಮವಾಗಿ ಸರಬರಾಜು ಆಗಬಹುದಾದ ಹಣ, ಮದ್ಯ ಸೇರಿ ದಾಖಲೆ ಇಲ್ಲದ ವಸ್ತುಗಳನ್ನು ಸಾಗಣೆ ಮಾಡುವ ವಾಹನಗಳ ತಪಾಸಣೆ ನಡೆಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net