ಆಯುರ್ವೇದಲ್ಲಿ ಹಲವು ಕಾಯಿಲೆಗಳಿಗೆ ಚಿಕಿತ್ಸೆ

blank

ಸೊರಬ: ಭಾರತೀಯ ವೈದ್ಯ ಪರಂಪರೆಯಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ವಿಶೇಷ ಸ್ಥಾನವಿದೆ. ಇದರಿಂದ ಹಲವು ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಜಡೆ ಹಿರೇಮಠ, ಸೊರಬ ಕಾನಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಚಾಮರಾಜಪೇಟೆಯ ಕಾನಕೇರಿ ಮಠದಲ್ಲಿ ಭಾನುವಾರ ತಾಲೂಕು ವೀರಶೈವ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಟ್ರಸ್ಟ್, ಆರೋಗ್ಯ ಭಾರತಿ ಶಿವಮೊಗ್ಗ, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಮತ್ತಿತರ ಸಂಸ್ಥೆಗಳಿಂದ ಆಯೋಜಿಸಿದ್ದ ಸಾಮಾನ್ಯ ಆರೋಗ್ಯ ಮತ್ತು ಕ್ಯಾನ್ಸರ್ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನುಷ್ಯನ ಧಾವಂತದ ಬದುಕು, ದುರಾಲೋಚನೆಗಳಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಇದರಿಂದ ಆತನ ಬದುಕು ಸುಖಕರವಾಗಿಲ್ಲ. ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ.ಭಟ್, ಸಮಾಜದಲ್ಲಿ ವೈದ್ಯ ವೃತ್ತಿ ಶ್ರೇಷ್ಠವಾದುದು. ರೋಗಿಗಳಲ್ಲಿ ನೈತಿಕ, ಮಾನಸಿಕ ಸ್ಥೈರ್ಯ ತುಂಬುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ವೈದ್ಯರ ಜೀವನದಲ್ಲಿ ಅನೇಕ ಸವಾಲುಗಳು ಬರುತ್ತವೆ. ಅವುಗಳನ್ನು ಎದುರಿಸಿ ವೃತ್ತಿ ಶ್ರೇಷ್ಠತೆ ಮೆರೆಯುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಡಾ. ಅನೂಪ್ ಅಲೇಕಲ್ ಮಾತನಾಡಿ, ಆಯುರ್ವೇದದಲ್ಲಿ ಇರುವ ಸೂತ್ರಗಳನ್ನು ಅನುಸರಿಸಿದರೆ ರೋಗಗಳನ್ನು ದೂರವಿರಿಸಲು ಸಾಧ್ಯ ಎಂದರು. ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಕುರಿತು ಡಾ. ಕೆ.ಪಿ.ಭವ್ಯಾ, ಆಯುರ್ವೇದದ ಮಹತ್ವ ಬಗ್ಗೆ ಡಾ. ಸೌಭಾಗ್ಯಾ ಮಾಹಿತಿ ನೀಡಿದರು.
ಶಿಬಿರ ಸಂಚಾಲಕ ಅ.ನ.ವಿಜಯೇಂದ್ರ ರಾವ್, ವೀರಶೈವ ಲಿಂಗಾಯಿತ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಟ್ರಸ್ಟ್‌ನ ಅಶೋಕ್ ನಾಯಕ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಜಯಶೀಲ ಗೌಡ, ಜಾನಕಪ್ಪ, ರೇಖಾ ಜಗದೀಶ್, ಡಾ. ಶ್ವೇತಾ, ಈರೇಶ ಗೌಡ, ನಾಗರಾಜ್, ನಿಜಗುಣ ಚಂದ್ರಶೇಖರ್, ಡಾ. ಪಲ್ಲವಿ ಇತರರಿದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…