21 C
Bengaluru
Thursday, January 23, 2020

ಸೇವೆ ಧ್ಯೇಯವಾದ್ರೆ ಅವಕಾಶ ಹೆಚ್ಚು

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ತುಮಕೂರು: ಸಾಮಾಜಿಕ ಗೌರವ ಎಲ್ಲರಿಗೂ ಸುಲಭವಾಗಿ ಸಿಗುವುದಿಲ್ಲ. ಸೇವೆಯೇ ಜೀವನದ ಧ್ಯೇಯವಾಗಿಸಿಕೊಂಡು ದುಡಿದವರಿಗೆ ಆ ಅವಕಾಶ ಲಭಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಗರಿಕ ಸಮಿತಿ ಹಾಗೂ ಡಾ.ಎನ್.ಎಸ್.ಜಯಕುಮಾರ್ ಅಭಿಮಾನಿ ಬಳಗದಿಂದ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಸಹಕಾರರತ್ನ ಎನ್.ಎಸ್.ಜಯಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರ ಸರ್ಕಾರಕ್ಕೆ ಪರ್ಯಾಯವಾಗಿದೆ ಎಂದು ಭಾವಿಸುತ್ತೇವೆ, ಅಸಹಾಯಕರು, ಅಶಕ್ತರಿಗೆ ನೆರವಾಗಲು ಸಹಕಾರ ಸಂಘಗಳು ಗಮನ ನೀಡಬೇಕು ಎಂದು ಆಶಿಸಿದರು.

ಸಹಕಾರ ಬ್ಯಾಂಕ್‌ಗಳಿಗೆ ಸರ್ಕಾರವು ಎಲ್ಲ ಕಾಲದಲ್ಲಿಯೂ ಶಕ್ತಿ ತುಂಬಿದೆ. ಆರ್ಥಿಕವಾಗಿ ಗ್ರಾಮೀಣ ಭಾಗದಲ್ಲಿ ನಿರೀಕ್ಷಿತ ಬೆಳವಣಿಗೆ ಆಗಿಲ್ಲ. ಬಡ ಮಕ್ಕಳಿಗೆ ಶಕ್ತಿ ತುಂಬುವ, ರೈತರಿಗೆ ಅನುಕೂಲವಾಗುವ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದ ಜೆಸಿಎಂ, ಸಹಕಾರ ಕ್ಷೇತ್ರದಲ್ಲಿ ನಾಯಕತ್ವ ರೂಪಿಸುವ ಕಲೆ ಇರುತ್ತದೆ. ನಾನು ಸಹಕಾರಿ ಕ್ಷೇತ್ರದ ಮೂಲಕವೇ ನಾಯಕನಾಗಿ ಬೆಳೆದವನು ಎಂದು ಸ್ಮರಿಸಿಕೊಂಡರು.
ಸಹಕಾರ ಕ್ಷೇತ್ರ ಜಾತಿ, ಮತ, ಪಕ್ಷಗಳನ್ನು ಮೀರಿ ನಿಂತಿದೆ, ಇಂತಹ ಕ್ಷೇತ್ರದಿಂದ ನೀಡಲಾಗುವ ಸಹಕಾರಿ ರತ್ನ ಪ್ರಶಸ್ತಿ ಅರ್ಹರಿಗೆ ಸಿಕ್ಕಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಸಂಸ್ಥೆಯನ್ನು ಹಾಳುಗೆಡವುವ ಸಹಕಾರಿಗಳ ಸಂಖ್ಯೆ ಕಡಿಮೆ ಎನಿಲ್ಲ. ಟಿಎಂಸಿಸಿ ಸಂಸ್ಥೆ ಕಟ್ಟಿಬೆಳಸುವಲ್ಲಿ ಜಯಕುಮಾರ್ ಪಾತ್ರ ದೊಡ್ಡದು. ಸಾಲ ನೀಡಲಷ್ಟೇ ಸಹಕಾರಿ ಕ್ಷೇತ್ರ ಸೀಮಿತವಾಗದೆ, ಹೊಸ ಚಿಂತನೆ ಇರುವವರು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವವರ ಸಂಖ್ಯೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಾಗಬೇಕು ಎಂದು ಸಲಹೆ ನೀಡಿದರು.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಜಯಕುಮಾರ್ ಸಾಧನೆ ಪ್ರಶಂಸನಾರ್ಹ. ಪ್ರಶಸ್ತಿ ಅವರ ಜವಬ್ಧಾರಿ ಹೆಚ್ಚಿಸಿದೆ. ಸಹಕಾರ ಸಂಸ್ಥೆಗಳು ಲಾಭಕಷ್ಟೇ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿಯೂ ಹೆಚ್ಚು ತೊಡಗುತ್ತಿವೆ ಎಂದರು.

ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸ್ವಾಭಿಮಾನಿ ಜಯಕುಮಾರ್ ಸಾಧನೆ ತೆರದ ಪುಸ್ತಕವಾಗಿದ್ದು, ಟಿಎಂಸಿಸಿ ಸಂಸ್ಥೆಯನ್ನು ಎತ್ತರವಾಗಿ ಬೆಳೆಸಿದ್ದಾರೆ. ಅವರ ಹೆಸರಿನಲ್ಲಿಯೇ ಜಯ ಇದ್ದು ಯಾವ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಸಾಧಿಸಿದ್ದಾರೆ ಎಂದರು. ಆರ್ಥಿಕ ವಹಿವಾಟು ನಡೆಸುವ ಸಂಸ್ಥೆಯನ್ನು ನಡೆಸಲು ಜಯಕುಮಾರ್ ಶ್ರಮವಿದೆ, ಉಳ್ಳವರಿಗೆ ಸಾಲ ಕೊಡುವುದು ದೊಡ್ಡದಲ್ಲ, ದುಡ್ಡ್ಡು ಇಲ್ಲದವರಿಗೂ ಸಾಲ ನೀಡುವ ವ್ಯವಸ್ಥೆಯಾಗಬೇಕು ಎಂದರು. ಶಾಸಕ ಬಿ.ಸಿ.ನಾಗೇಶ್, ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ಮಾಜಿ ಸಚಿವ ಸೊಗಡು ಶಿವಣ್ಣ, ಸಹಕಾರ ಮಹಾಮಂಡಲ ಅಧ್ಯಕ್ಷ ಗಂಗಣ್ಣ, ಟಿಎಂಸಿಸಿ ಉಪಾಧ್ಯಕ್ಷ ಶ್ರೀಕರ ಇದ್ದರು.

ರಾಜಕಾರಣದಲ್ಲಿ ರಿಯಲ್ ಎಸ್ಟೇಟ್, ಗಣಿಧಣಿಗಳು ಬೆಳೆಯುತ್ತಿದ್ದಾರೆ. ಸೇವೆ ಮಾಡಿ ನಾಯಕರಾಗುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರ ಮೂಡಿಸಿದೆ. ಎನ್.ಎಸ್.ಜಯಕುಮಾರ್ ಅಂಥವರು ವಿಧಾನ ಪರಿಷತ್‌ಗೆ ನಾಮನಿರ್ದೇಶನವಾಗಲಿ.

ಎಚ್.ಕೆ.ಪಾಟೀಲ್ ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ

ಸಹಕಾರ ರತ್ನ ಪ್ರಶಸ್ತಿ ಲಭಿಸಲು ಜನರ ಪ್ರೀತಿ ಕಾರಣ, ಇದರ ಶ್ರೇಯಸ್ಸು ಅವರಿಗೆ ಸಲ್ಲಬೇಕು. ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದ್ದು ಭವಿಷ್ಯದಲ್ಲಿ ಸಂಸ್ಥೆಯನ್ನು ಮತ್ತಷ್ಟು ಕಟ್ಟುವ ಕನಸಿದೆ. ಎಲ್ಲರಿಗೂ ಧನ್ಯವಾದಗಳು.

ಎನ್.ಎಸ್.ಜಯಕುಮಾರ್ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...