

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರವ್ಯಾಪಿ 15 ಸಾವಿರಕ್ಕಿಂತ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
ಐವರು ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಭದ್ರತೆ ನಿಯೋಜನೆ ಮಾಡಲಾಗುತ್ತದೆ. 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಪ್ರತಿ ಏರಿಯಾದಲ್ಲಿ ಅಧಿಕಾರಿಗಳು, ಹೊಯ್ಸಳ, ಚೀತಾ ಗಸ್ತು ತಿರುಗಲಿದ್ದು, ಬಂದ್ ನೆಪದಲ್ಲಿ ಕಾನೂನು ಭಂಗ ಮಾಡುವಂತಿಲ್ಲ. ಬಂದ್ ಮಾಡಲು ಯಾರೂ ಅನುಮತಿ ಕೇಳಿಲ್ಲ. ಯಾರಿಗೂ ಕೊಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬಲವಂತವಾಗಿ ಅಂಗಡಿ, ಕಚೇರಿ, ರಸ್ತೆ ತಡೆ ಮಾಡುವಂತಿಲ್ಲ. ಮಾಡಿದರೆ ಅಂಥವರ ವಿರುದಟಛಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಜನಸಾಮಾನ್ಯರು ನಿರ್ಭಯವಾಗಿ ಓಡಾಟ ನಡೆಬಹುದು. ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಸೇವೆ ಇರಲಿದೆ. ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು.