More

    ಮರಾಠಾ ಪ್ರಾಧಿಕಾರ ರದ್ದುಗೊಳಿಸಿ

    ಬೆಳಗಾವಿ: ಸರ್ಕಾರ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣದ) ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಡಾ.ಎಂ.ಜಿ.ಹಿರೇಮಠ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಗಡಿ ಭಾಗದಲ್ಲಿ ನಿರಂತರವಾಗಿ ಕನ್ನಡ ವಿರೋಧಿ ಚಟುವಟಿಕೆ ನಡೆಸಿಕೊಂಡು ಬರುತ್ತಿರುವ ಮರಾಠಿಗರಿಗೆ ವಿವಿಧ ಸೌಲಭ್ಯ ನೀಡುತ್ತಿರುವುದು ಸರಿಯಾದುದಲ್ಲ. ಇದೀಗ ರಾಜಕೀಯ ಲಾಭಕ್ಕಾಗಿ ಸರ್ಕಾರ ಕನ್ನಡ ಭಾಷೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದೆ. ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಕೈ ಬಿಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

    ಪ್ರತಿವರ್ಷ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸುವ ಮರಾಠಾ ಸಮುದಾಯದ ಜನರಿಗೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲವಾದರೆ ಮುಖಂಡರ ಮುಖಕ್ಕೆ ಮಸಿ ಬಳಿಯಲು ಕರವೇ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕರವೇ ಮುಖಂಡ ಮಹಾಂತೇಶ ರಣಗಟ್ಟಿಮಠ, ಆರ್.ಅಭಿಲಾಷ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts