More

    ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಿ

    ಬೆಳಗಾವಿ: ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಬಹಳಷ್ಟು ಆಸ್ತಿ, ಬೆಳೆ ಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವುದು ಸರಿಯಲ್ಲ. ಪ್ರಾಧಿಕಾರ ರದ್ದುಪಡಿಸಿ ಅದೇ 50 ಕೋಟಿ ರೂ. ನೆರವನ್ನು ಪ್ರವಾಹ ಪೀಡಿತರಿಗೆ ನೀಡಬೇಕು ಎಂದು ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಯುವ ಘಟಕದ ಅಧ್ಯಕ್ಷ ಈಶ್ವರಗೌಡ ಪಾಟೀಲ ಮಾತನಾಡಿ, ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಮರಾಠಿಗರು ಸ್ವಾಗತಿಸಿಲ್ಲ. ಪ್ರಾಧಿಕಾರ ರಚನೆಗೆ ಎಲ್ಲೂ ವಿಜಯೋತ್ಸವ ಆಚರಿಸುವುದು ಕಂಡುಬಂದಿಲ್ಲ. ಮರಾಠಿಗರಿಗೆ ಪ್ರಾಧಿಕಾರ ಅವಶ್ಯಕತೆ ಇಲ್ಲ. ಅದಕ್ಕಾಗಿ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಉಪಾಧ್ಯಕ್ಷ ರಾಜು ಯರಗಾಣಿ, ಮುಖಂಡರಾದ ಸುಹಾನಿ ಲೋಕಂ, ಕವಿತಾ ಮೆಹತಾರ್, ಸುರೇಖಾ ಅಳವಿ, ಪ್ರಕಾಶ ಮಾದಿಗರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts