VIDEO | ಮರಾಠಾ ಮೀಸಲಾತಿ ಕಿಚ್ಚು; ಶಾಸಕನ ಮನೆ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

Maratha Quota Protest
Published on

ಮಹಾರಾಷ್ಟ್ರ: ಮರಾಠಾ ಮೀಸಲಾತಿ ಆಂದೋಲನ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಹಾರಾಷ್ಟ್ರದ ಬೀಡು ಜಿಲ್ಲೆಯ ಮಜಲಗೈನ್‌ನಲ್ಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಶಾಸಕ ಪ್ರಕಾಶ್‌ ಸೋಲಂಕೆ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ ಪ್ರತಿಭಟನಾಕಾರರು ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಮನೆಗೆ ಬೆಂಕಿ ಹಚ್ಚಿದ ವೇಳೆ ಶಾಸಕರು, ಅವರ ಕುಟುಂಬ ಮತ್ತು ಸಿಬ್ಬಂದಿ ಮನೆಯೊಳಗಡೆ ಇದ್ದರು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆಕ್ರೋಶಗೊಂಡ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕರ ಮನೆಗೆ ಕಲ್ಲು ತೂರಾಟ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪ್ರತಿಭಟನೆಯ ವೇಳೆ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದರು. ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಗುಂಪು ಅವರ ಮನೆಗೆ ಬೆಂಕಿ ಹಚ್ಚಿದೆ. ಅವರ ಮನೆಯಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು.

ಮರಾಠ ಪ್ರತಿಭಟನಾಕಾರರ ಉಪವಾಸ ಸತ್ಯಾಗ್ರಹದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಆಕ್ರೋಶಗೊಂಡ ಪ್ರತಿಭಟನಾಕಾರರು ಬೀಡ್‌ನ ಮಜಲಗಾಂವ್‌ನಲ್ಲಿರುವ ಶಾಸಕ ಪ್ರಕಾಶ್ ಸೋಲಂಕೆ ಅವರ ನಿವಾಸದಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಕಲ್ಲು ತೂರಾಟ ನಡೆಸಿದರು ಮತ್ತು ಬೆಂಕಿ ಹಚ್ಚಿದರು. ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಪಕ್ಷದ ಅಜಿತ್ ಪವಾರ್ ವಿಭಾಗಕ್ಕೆ ಸೇರಿದವರು. ಘಟನೆ ನಡೆದ ಬಳಿಕ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ.

ಮಜಲಗಾಂವ್‌ನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸುತ್ತಿದ್ದಾಗ ಕೆಲವು ಪ್ರತಿಭಟನಾಕಾರರು ಹಿಂಸಾಚಾರಕ್ಕೆ ಇಳಿದು ಶಾಸಕರ ಮನೆ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು ಎಂದು ವರದಿಯಾಗಿದೆ. ಮನೆಯ ಗಾಜುಗಳನ್ನು ಒಡೆದು ಮನೆಯ ಹೊರಗೆ ನಿಲ್ಲಿಸಿದ್ದ ಕಾರುಗಳ ಮೇಲೂ ದಾಳಿ ನಡೆಸಿದ್ದಾರೆ. ಮನೆ, ಕಾರುಗಳಿಗೂ ಬೆಂಕಿ ಹಚ್ಚಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net