More

    ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕರಿಸಿದ ಮಹಾರಾಷ್ಟ್ರ ಸರ್ಕಾರ

    ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಂಡಿಸಿದ ಕೆಲವೇ ನಿಮಿಷಗಳಲ್ಲಿ ಮಸೂದೆಯನ್ನು ಅಂಗೀಕರಿಸಲಾಯಿತು.

    ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮತಾಂಧ ರಾಕ್ಷಸರಿಗೆ ರೆಕ್ಕೆ ಪುಕ್ಕ ಬಂದಂತಾಗಿದೆ: ಆರ್‌.ಅಶೋಕ್‌

    ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದು, ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಸ್ತರಿಸಿದೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿ ಸರ್ಕಾರ ಇಂದು ಅಂಗೀಕರಿಸಿದ ಶೇಕಡಾ 10ರಷ್ಟು ಮರಾಠ ಮೀಸಲಾತಿ ಮಸೂದೆಯು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಸರ್ಕಾರ ಪರಿಚಯಿಸಿದ್ದ ವಿಧೇಯಕವನ್ನೇ ಮುಂದುವರಿಸಲಾಗಿದೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ 2018 ರಂತೆಯೇ ಇದೆ. ಈ ಮೂಲಕ ದಶಕದಲ್ಲಿ ಮೂರನೇ ಬಾರಿಗೆ ಮರಾಠ ಮೀಸಲು ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.

    ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಸಚಿವ ಛಗನ್ ಭುಜಬಲ್ ಮಾತ್ರ ಮಸೂದೆಯನ್ನು ವಿರೋಧಿಸಿದರು. ಭುಜಬಲ್ ಅವರು ಒಬಿಸಿ ಕೋಟಾದ ಅಡಿಯಲ್ಲಿ ಮರಾಠರಿಗೆ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈಗ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಿದ್ದು, ಬಳಿಕ ಅದು ಕಾನೂನಾಗಿ ರೂಪುಗೊಳ್ಳಲಿದೆ. ಫೆ.17ರಂದು ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ-ಪಾಟೀಲ್ ಅವರಿಗೆ ಫೆ.20ರಂದು ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಸಮುದಾಯಕ್ಕೆ ಮೀಸಲಾತಿ ನೀಡಲು ವಿಧಿವಿಧಾನಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರು.

    ಮರಾಠಾ ಸಮುದಾಯಕ್ಕೆ ದ್ರೋಹ: ಮರಾಠಾ ಮೀಸಲಾತಿ ವಿಚಾರವಾಗಿ ಜಾರಂಗೆ-ಪಾಟೀಲರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಏಳನೇ ದಿನಕ್ಕೆ ಕಾಲಿಟ್ಟ ದಿನವೇ ಈ ಘೋಷಣೆ ಘೋಷಿಸಲಾಯಿತು.

    ಆದರೆ, ಈ ಮಸೂದೆಯನ್ನು ಅಂಗೀಕರಿಸಿರುವುದು ಮರಾಠಾ ಸಮುದಾಯಕ್ಕೆ ಮಾಡಿದ ದ್ರೋಹ ಎಂದು ಕಾರ್ಯಕರ್ತರೊಬ್ಬರು ಬಣ್ಣಿಸಿದ್ದಾರೆ. ಕೋಟಾವು ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದ ಅಡಿಯಲ್ಲಿರಬೇಕು ಮತ್ತು ಪ್ರತ್ಯೇಕವಾಗಿರಬಾರದು ಎಂದು ಪಾಟೀಲ್ ಹೇಳಿದ್ದಾರೆ. ಚುನಾವಣೆ ಮತ್ತು ಮತಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದು ಮರಾಠ ಸಮುದಾಯಕ್ಕೆ ಮಾಡಿದ ದ್ರೋಹ” ಎಂದು ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    “ಮರಾಠಾ ಸಮುದಾಯವು ನಿಮ್ಮನ್ನು ನಂಬುವುದಿಲ್ಲ. ನಮ್ಮ ಮೂಲ ಬೇಡಿಕೆಗಳಿಂದ ಮಾತ್ರ ನಮಗೆ ಲಾಭವಾಗುತ್ತದೆ. ಈ ಮೀಸಲಾತಿಯು ನಡೆಯುವುದಿಲ್ಲ. ಸರ್ಕಾರವು ಈಗ ಮೀಸಲಾತಿ ನೀಡಲಾಗಿದೆ ಎಂದು ಸುಳ್ಳು ಹೇಳುತ್ತದೆ ಎಂದು ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜಸ್ಥಾನ: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧ ಆಯ್ಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts