ಬೆಳ್ತಂಗಡಿ: ಕರಾವಳಿ ಮರಾಟಿ ಸಮಾವೇಶ 2024 ಗದ್ದಿಗೆ ನ.10ರಂದು ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್ ಕಾಲೇಜು ನುಡಿಸಿರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೆಳ್ತಂಗಡಿ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಎಚ್.ಎಲ್. ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ 9ರಂದು ಉದ್ಯೋಗ ಮೇಳ, 24ರಂದು ಬೆಳ್ತಂಗಡಿ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಮರಾಟಿ ವಧು-ವರರ ಸಮಾವೇಶ, ಮರಾಟಿ ಪ್ರತಿಭಾ ಪುರಸ್ಕಾರ, ಮರಾಟಿ ಸಾಧನಾ ಪುರಸ್ಕಾರ, ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.
ಕರಾವಳಿ ಮರಾಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾವೇಶದ ಅಧ್ಯಕ್ಷ ಎಚ್.ರಾಜೇಶ್ ಪ್ರಸಾದ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮೂಡುಬಿದಿರೆ ಶಾಸಕ ಉಮಾನಾಥ್ ಎ.ಕೋಟ್ಯಾನ್, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಕೆ.ಅಭಯಚಂದ್ರ ಜೈನ್ ಮತ್ತು ಇತರರು ಭಾಗವಹಿಸಲಿದ್ದಾರೆ. ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ ನಾಯ್ ಮರಾಟಿಗರ ಮನವಿ ಮಂಡನೆ ಮಾಡಲಿದ್ದಾರೆ.
ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈಯವರನ್ನು ಸನ್ಮಾನಿಸಲಾಗುವುದು. ಸಮಾರೋಪ ಸಮಾರಂಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವಿ.ಸುನೀಲ್ ಕುಮಾರ್, ರಾಜೇಶ್ ನಾಕ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ ಭಾಗವಹಿಸಲಿದ್ದಾರೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಡಾ.ಬಾಲಕೃಷ್ಣ ಸಿ.ಎಚ್.ಸಮಾರೋಪ ಭಾಷಣ ಮಾಡಲಿದ್ದಾರೆ.