

ಕಾಸರಗೋಡು: ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘ, ಶಾರದಾ ಮರಾಟಿ ಚಾರಿಟೆಬಲ್ ಟ್ರಸ್ಟ್ ಹಾಗೂ ಶಾರದಾ ಮರಾಟಿ ಮಹಿಳಾ ವೇದಿಕೆ ವತಿಯಿಂದ ಮರಾಟಿ ಸಮಾಜ ಬಾಂಧವರಿಗಾಗಿ ಕ್ರೀಡಾಕೂಟ, ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಪೆರ್ಲ ಶ್ರೀ ಶಾರದಾ ಮರಾಟಿ ಸಭಾಭವನ ವಠಾರದಲ್ಲಿ ನಡೆದ ಸ್ಪರ್ಧಾಕೂಟವನ್ನು ಪೆರಿಯ ತಾಂತ್ರಿಕ ಶಿಕ್ಷಣ ಶಾಲೆ ಪ್ರಾಧ್ಯಾಪಕ ಪುರಂದರ ಉದ್ಘಾಟಿಸಿದರು. ಎಣ್ಮಕಜೆ ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ ಅಮೆಕ್ಕಳ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಪೊಲೀಸ್ ಅಧಿಕಾರಿ ನಾಗೇಶ್ ನಾಯ್ಕ, ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಜಿ.ನಾಯ್ಕ, ಡಾ.ನಾರಾಯಣ ನಾಯ್ಕ, ಡಾ.ಶಿವ ನಾಯ್ಕ ಭಾಗವಹಿಸಿದ್ದರು. ಗೋಪಿಕೃಷ್ಣ ಬದಿಯಡ್ಕ ಸ್ವಾಗತಿಸಿದರು. ಕುಸುಮಾವತಿ ಪ್ರಾರ್ಥಿಸಿದರು. ಕಾರ್ಯದರ್ಶಿ ಶ್ರೀಧರ್ ನಿರೂಪಿಸಿದರು. ಮರಾಟಿ ಮಹಿಳಾ ವೇದಿಕೆ ಅಧ್ಯಕ್ಷೆ ವಾರಿಜಾ ಅಡ್ಯನಡ್ಕ ವಂದಿಸಿದರು.