ಎಚ್‌ಐವಿ ನಿರ್ಮೂಲನೆಗೆ ಮ್ಯಾರಥಾನ್

marathana doddaballapura
marathana doddaballapura
Published on

ಜಿಲ್ಲಾ ಏಡ್ಸ್ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಚಾಲನೆ


ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಎಚ್‌ಐವಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಎಚ್‌ಐವಿ ನಿಯಂತ್ರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ತಿಳಿಸಿದರು.
ಪಟ್ಟಣದ ಭಗತ್‌ಸಿಂಗ್ ಆಟದ ಮೈದಾನದಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಘಟಕದ ಗೇಲ್ ಲಿಮಿಟೆಡ್, ತಾಲೂಕು ಅಥ್ಲೆಟಿಕ್ಸ್ ಅಸೋಸಿಯೇಷನ್, ಜೀನಿಯಸ್ ಅಡ್ವೆಂಚರ್ ಸ್ಫೋರ್ಟ್ಸ್ ಮತ್ತು ಕಲ್ಚರಲ್ ಅಕಾಡೆಮಿಯಿಂದ ಯುವ ಪೀಳಿಗೆಯಲ್ಲಿ ಎಚ್‌ಐವಿಯ ಅಪಾಯದ ಕುರಿತ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಎಚ್‌ಐವಿ ಪರೀಕ್ಷೆ ಹೆಚ್ಚಿಸಲಾಗಿದೆ. ಗರ್ಭಿಣಿಯರಿಗೆ ಶೇ.100 ಪರೀಕ್ಷೆ ನಡೆಸಲಾಗುತ್ತಿದೆ. ಎಚ್‌ಐವಿ ಚಿಕಿತ್ಸೆಗೆ 2 ಆಸ್ಪತ್ರೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿದೆ ಎಂದರು.
ಟಿಎಚ್‌ಒ ಡಾ. ಶಾರದಾ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಮ್ಯಾರಥಾನ್‌ನಂತಹ ಕ್ರೀಡೆಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು.
ಭಗತ್ ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಮ್ಯಾರಥಾನ್, ತಾಲೂಕು ಕಚೇರಿ, ಕೊಂಗಾಡಿಯಪ್ಪ ಕಾಲೇಜು ಮುಖ್ಯ ರಸ್ತೆ, ತೇರಿನ ಬೀದಿ, ರಂಗಪ್ಪ ವೃತ್ತದ ಮಾರ್ಗವಾಗಿ ಸಾಗಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಬಳಿ ಸಮಾಪ್ತಿಯಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net