More

    ಮತದಾನ ಜಾಗೃತಿಗೆ ಮ್ಯಾರಥಾನ್

    ಧಾರವಾಡ: ಜಿಲ್ಲೆಯ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಲು ಮ್ಯಾರಥಾನ್, ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ. ಹೇಳಿದರು.
    ನಗರದಲ್ಲಿ ಶನಿವಾರ ಆಯೋಜಿಸಿದ್ದ ಮತದಾನ ಜಾಗೃತಿ ಮ್ಯಾರಥಾನ್ ಗೆ ಕೆಸಿಡಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
    ಮತದಾರರ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿ ಮತಗಟ್ಟೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ. ಮತದಾನ ಹೆಚ್ಚಳಕ್ಕೆ ಕ್ರಮ ವಹಿಸಲಾಗಿದೆ ಎಂದರು
    ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಮ್ಯಾರಥಾನ್ ಕೆಸಿಡಿಯಿಂದ ಆರಂಭಗೊ0ಡು ಆಲೂರು ವೆಂಕಟರಾವ್ ವೃತ್ತ, ರಾಣಾ ಪ್ರತಾಪಸಿಂಹ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ಹಳೇ ಬಸ್ ನಿಲ್ದಾಣ, ಕೊರ್ಟ್ ವೃತ್ತ ಮೂಲಕ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು.
    ವಿವಿಧ ಶಾಲೆ- ಕಾಲೇಜುಗಳ ಅಥ್ಲೆಟಿಕ್ ಪಟುಗಳು, ಜಿ.ಪಂ. ಅಽಕಾರಿ, ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts