18.1 C
Bangalore
Saturday, December 7, 2019

ಮರವೂರು ಡ್ಯಾಂ ಮತ್ತಷ್ಟು ಬರಿದು

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಭರತ್ ಶೆಟ್ಟಿಗಾರ್ ಮಂಗಳೂರು
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಣೆಕಟ್ಟು ಮತ್ತಷ್ಟು ಬರಿದಾಗಿದೆ. ಪಂಪಿಂಗ್ ಹಾಗೂ ಇತರ ಕಾರಣಗಳಿಂದ ದಿನದಿಂದ ದಿನಕ್ಕೆ ಹಲವು ಸೆಂ.ಮೀ.ಗಳಷ್ಟು ನೀರು ಖಾಲಿಯಾಗುತ್ತಿದೆ.

ಬೇಸಿಗೆ ಮಳೆ ಕೊರತೆ ಹಿನ್ನೆಲೆಯಲ್ಲಿ ಅಣೆಕಟ್ಟಿನ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. 3.5 ಮೀ ಎತ್ತರ ನೀರು ಸಂಗ್ರಹ ಸಾಮರ್ಥ್ಯವಿರುವ ಅಣೆಕಟ್ಟಿನಲ್ಲಿ ಪ್ರಸ್ತುತ 2 ಮೀ.ನಷ್ಟು ನೀರಿದೆ. ಜತೆಗೆ ಡ್ಯಾಂ ಒಳಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹೂಳು ತುಂಬಿರುವುದರಿಂದ ನೀರಿನ ಸಂಗ್ರಹವೇ ಕಡಿಮೆಯಾಗಿದೆ. ದಡದಲ್ಲಿ ನಿಂತು ನೋಡಿದಾಗ ತಳ ಕಾಣಿಸುತ್ತದೆ. ಅಲ್ಲಲಿ ಹೂಳಿನ ದಿಬ್ಬಗಳೂ ಮೇಲಕ್ಕೆದ್ದು ಕಾಣಿಸುತ್ತಿದೆ. ಇದು ನೀರು ಪೂರೈಕೆಯಾಗುವ ಗ್ರಾಮಗಳ ಜನರ ಆತಂಕಕ್ಕೆ ಕಾರಣವಾಗಿದೆ.

ಅಣೆಕಟ್ಟಿನಿಂದ ದಿನಕ್ಕೆ 5 ಎಂಎಲ್‌ಡಿ (50 ಲಕ್ಷ ಲೀಟರ್) ನೀರನ್ನು ಪಂಪ್‌ಮಾಡಿ ಶುದ್ಧೀಕರಿಸಿ ಗ್ರಾಮಗಳಿಗೆ ಸರಬರಾಜು ಮಾಡಲಾಗುತ್ತದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 11-12ರವರೆಗೂ ಪಂಪಿಂಗ್ ನಡೆಯುತ್ತದೆ. ಬಜ್ಪೆ, ಜೋಕಟ್ಟೆ, ಮರವೂರು, ಕೆಂಜಾರು, ಪೆರ್ಮುದೆ, ಕುತ್ತೆತ್ತೂರು, ಮೂಡುಶೆಡ್ಡೆ, ಪಡುಶೆಡ್ಡೆ, ತೆಂಕ ಎಕ್ಕಾರು, ಬಡಗ ಎಕ್ಕಾರು, ಬಾಳ, ಕಳವಾರು, ಸೂರಿಂಜೆ ಮತ್ತು ದೇಲಂತಬೆಟ್ಟು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತದೆ. ಬಜ್ಪೆ ಸಿದ್ಧಾರ್ಥ ನಗರದಲ್ಲಿರುವ 3 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕನ್ನು ದಿನಕ್ಕೆ 4-5 ಸಲ ತುಂಬಿಸಲಾಗುತ್ತದೆ. ಬಜ್ಪೆ ಪೇಟೆಯಲ್ಲಿ 2 ಲಕ್ಷ ಲೀ. ಟ್ಯಾಂಕ್ ಇದ್ದು, ಅದಕ್ಕೆ 10 ಲಕ್ಷ ಲೀ. ಪ್ರತಿ ದಿನ ಪೂರೈಸಲಾಗುತ್ತದೆ. ಮೂಡುಶೆಡ್ಡೆಯಲ್ಲಿರುವ ಟ್ಯಾಂಕ್‌ನಲ್ಲಿ 4 ಲಕ್ಷ ಲೀ. ಪ್ರತಿ ದಿನ ತುಂಬಿಸಲಾಗುತ್ತದೆ. ನೀರಿನ ಹರಿವು ಕಡಿಮೆಯಾಗಿರುವುದು ಹಾಗೂ ನೀರೆತ್ತುವ ಪ್ರಮಾಣ ಹೆಚ್ಚಾಗಿರುವುದರಿಂದ ಅಣೆಕಟ್ಟಿನಲ್ಲಿ ನೀರು ಖಾಲಿಯಾಗುವ ಹಂತಕ್ಕೆ ಬಂದಿದೆ.

ಪಂಪ್ ಬಳಸಿ ಕೃಷಿಗೆ ನೀರು: ಅಣೆಕಟ್ಟಿನ ಮೇಲ್ಭಾಗದಲ್ಲಿ ನದಿಯ ಎರಡೂ ಕಡೆ ತೆಂಗು- ಅಡಕೆ ತೋಟಗಳಿವೆ. ಕೃಷಿಗೆ ನೀರುಣಿಸುವ ಉದ್ದೇಶದಿಂದ ನದಿ ಪಾತ್ರದ ಕೃಷಿಕರು ನದಿ ನೀರನ್ನು ಪಂಪ್ ಬಳಸಿ ತೆಗೆಯುತ್ತಿದ್ದಾರೆ. ಕುಡಿಯುವ ನೀರಿನ ಪಂಪಿಂಗ್ ಹೊರತು ಪಡಿಸಿಯೂ ಹಲವು ಲಕ್ಷ ಲೀ.ನೀರು ಖಾಲಿಯಾಗುತ್ತಿದೆ. ಜತೆಗೆ ಬಿಸಿಲ ಬೇಗೆಯಿಂದಲೂ ನೀರು ಖಾಲಿಯಾಗುತ್ತಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಬಜ್ಪೆ ಪಂಚಾಯಿತಿ ವ್ಯಾಪ್ತಿಗೆ ಪ್ರಸ್ತುತ ಜೀವ ಜಲವೇ ಆಗಿದೆ. ಇಲ್ಲದೇ ಹೋಗಿದ್ದರೆ ನೀರಿಗಾಗಿ ಪರಿತಪಿಸಬೇಕಿತ್ತು. ಮೂರು ಟ್ಯಾಂಕ್‌ಗಳಲ್ಲಿ ತುಂಬಿಸಿ ನೀರು ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತಿದೆ. ಮಳೆಯಾಗದೆ ಡ್ಯಾಂ ನೀರು ಖಾಲಿಯಾದರೆ ಬೇರೆ ಪರ್ಯಾಯ ಮೂಲ ಹುಡುಕಬೇಕು.
ಸಾಯಿಶ್ ಚೌಟ ಬಜ್ಪೆ ಗ್ರಾಪಂ ಪಿಡಿಒ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...