More

    ಮಾರ್ಚ್ 03 ವಿಶ್ವ ಕನ್ನಡ ಚಲನಚಿತ್ರ ದಿನ: ಸಿಎಂ ಘೋಷಣೆ

    ಬೆಂಗಳೂರು: 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಭವನದಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

    13ನೇ ಬೆಂಗಳೂರು ಅಂತರ್​ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಇಂತಹ ಚಲನ ಚಿತ್ರೋತ್ಸವಗಳನ್ನು ಆಯೋಜಿಸಲು ಹಲವು ತಿಂಗಳುಗಳೇ ಬೇಕಾಗುತ್ತಿದ್ದವು. ಆದರೆ, ತಂತ್ರಜ್ಞಾನ ಬೆಳೆದಿರುವ ಸಂದರ್ಭದಲ್ಲಿ ಅತ್ಯಲ್ಪ ಅವಧಿಯಲ್ಲಿ ಚಲನಚಿತ್ರೋತ್ಸವಗಳನ್ನು ಆಯೋಜಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

    ಕನ್ನಡದ ಮೊಟ್ಟ ಮೊದಲ ವಾಕ್ ಚಿತ್ರ ಸತಿ ಸುಲೋಚನ 1934 ರ ಮಾರ್ಚ್ 3 ರಂದು ತೆರೆಕಂಡ ಸಂಸ್ಮರಣೆಯಲ್ಲಿ ಮಾರ್ಚ್ 3 ರನ್ನು ವಿಶ್ವ ಕನ್ನಡ ಚಲನಚಿತ್ರ ದಿನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಇನ್ನು ಮುಂದೆ ಪ್ರತಿ ವರ್ಷ ಇದೇ ದಿನದಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಪ್ರಾರಂಭಿಸಲಾಗುವುದು ಎಂದರು.

    ನಾಳೆಯ ಬಜೆಟ್’ಅನ್ನು ಕನ್ನಡ ಚಿತ್ರರಂಗ ಯಾವತ್ತೂ ಮರೆಯೋದಿಲ್ಲ: ಮುನಿರತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts