More

    ಗಾಂಜಾ ಸೇವನೆ ಮಾಡಿದ ಮೂವರ ಬಂಧನ

    ಹಾವೇರಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಇಲ್ಲಿಯ ಸೈಬರ್ ಕ್ರೈಂ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
    ಇಲ್ಲಿಯ ನಾಗೇಂದ್ರಮಟ್ಟಿಯ ನಿವಾಸಿ ದಿಳ್ಳೆಪ್ಪ ಮಲ್ಲಪ್ಪ ಅಳಲಗೇರಿ (23), ಶ್ರೀಕಾಂತ ಕುಮಾರಸ್ವಾಮಿ ಕುಲಕರ್ಣಿ (26), ಶ್ರೀರಾಜ್ ಹುಸೇನಸಾಬ ಮೋಟೆಬೆನ್ನೂರ (26) ಬಂಧಿತ ಆರೋಪಿಗಳು.
    ಇವರು ಸಾರ್ವಜನಿಕರ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಓಡಾಡುತ್ತಿದ್ದರು. ಇವರ ಮೇಲೆ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಇವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಕೂಡಲೇ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts