More

    ಫೆ.9ರಿಂದ 9 ದಿನಗಳ ಕಾಲ ಹೊಸನಗರದಲ್ಲಿ ಮಾರಿಕಾಂಬಾ ಜಾತ್ರೆ

    ಹೊಸನಗರ: ಪಟ್ಟಣದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಮಂಗಳವಾರ ಚಾಲನೆ ದೊರೆಯಲಿದ್ದು, 9 ದಿನಗಳ ಕಾಲ ನಡೆಯಲಿದೆ.

    ದೇವಿಯ ತವರುಮನೆ ಎಂದು ಬಿಂಬಿತವಾಗಿರುವ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಮಂಗಳವಾರ ಉತ್ಸವಕ್ಕೆ ಚಾಲನೆ ಸಿಗಲಿದೆ. ಮೊದಲ ದಿನ ವಿಶೇಷ ಆಚರಣೆ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ.
    ಮಾರಿಗುಡ್ಡದಲ್ಲಿರುವ ಶ್ರೀ ಮಾರಿಕಾಂಬಾ ದೇಗುಲದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ 8 ದಿನಗಳ ಕಾಲ ಉತ್ಸವ ಮುಂದುವರಿಯಲಿದೆ. ವಿವಿಧ ಸಮುದಾಯದವರಿಂದ ವಿಶೇಷ ಪೂಜೆ, ಹರಕೆ ಸಮರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಅಂಗಡಿ ಮುಂಗ್ಗಟ್ಟುಗಳನ್ನು ತೆರೆದಿದ್ದು, ಮಕ್ಕಳ ಮನರಂಜನೆಗಾಗಿ ವಿವಿಧ ಆಟಿಕೆಗಳನ್ನು ಅಳವಡಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts