ಪರಿಸರ ಉಳಿವಿಗೆ ಮಾರಿಕಾಂಬಾ ಸಂಘ ಯತ್ನ

vanamahotsava
ವನಮಹೋತ್ಸವ ಕಾರ್ಯಕ್ರಮ ನಡೆಯಿತು.
Published on

ಕುಂದಾಪುರ: ಗಿಡ ನೆಟ್ಟು ಪೋಷಿಸುವ ಮೂಲಕ ಉತ್ತಮ ಪರಿಸರ ನಿರ್ಮಾಣ ಕಾರ್ಯದಲ್ಲಿ ಮಾರಿಕಾಂಬ ಮಹಿಳಾ ಸಂಘ ತೊಡಗಿಸಿಕೊಂಡಿದೆ ಎಂದು ಮಾರಿಕಾಂಬ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಫಿಲೋಮಿನಾ ಫನಾರ್ಂಡಿಸ್ ಹೇಳಿದರು.

ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025ರ ಪ್ರಯುಕ್ತ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಸೂಚನೆ ಮೇರೆಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಸಹಿತ ವಿವಿಧ ಸಂಘಗಳ ನೇತೃತ್ವದೊಂದಿಗೆ ಕೊಡಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಮಂಗಳವಾರ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗಂಗೊಳ್ಳಿಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು. ಮುಖ್ಯಶಿಕ್ಷಕಿ ನಯನಾ ನಾಯಕ್, ಎಸ್‌ಡಿಎಂಸಿ ಸದಸ್ಯೆ ಸವಿತಾ, ಮಾರಿಕಾಂಬಾ ಸಂಘದ ಉಪಾಧ್ಯಕ್ಷೆ ರತ್ನಾ ಟಿ.ದೇವಾಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸ್ವಾಮಿಲಿಂಗೇಶ್ವರ, ವಿಜಯ ಬಿ., ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ಶಾಂತಾ, ರೇಖಾ ಜಿ., ರೇಣುಕಾ, ಶ್ಯಾಮಲಾದೇವಿ, ಲಲಿತಾ ಖಾರ್ವಿ, ಶಾಂತಿ, ಪ್ರಶಾಂತ್, ಸಂಘದ ಸದಸ್ಯರು, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು. ಹರ್ಷ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net