More

    ಕರ್ನಾಟಕ ಮರಾಠಾ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರಚಿಸಿ

    ಸಾಗರ: ಮರಾಠಿ ಪ್ರಾಧಿಕಾರದ ಬದಲು ಕರ್ನಾಟಕ ಮರಾಠಾ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯಿಸಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್​ನಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ವಿ.ಹಿತಕರ ಜೈನ್ ಮಾತನಾಡಿ, ರಾಜ್ಯದಲ್ಲಿ ಕನ್ನಡ ಹೊರತುಪಡಿಸಿ ಇತರೆ ಯಾವ ಪ್ರಾಧಿಕಾರವನ್ನು ರಚನೆ ಮಾಡಬಾರದು. ಇದರಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಯ ವಿಶಾಲ ದೃಷ್ಟಿಯಿಂದ ಪ್ರಾಧಿಕಾರ ಅಥವಾ ಮಂಡಳಿ ರಚಿಸುವಾಗ ಸ್ಥಳೀಯ ಅಭಿವೃದ್ಧಿ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು.

    ಈಗಾಗಲೇ ರಾಜ್ಯ ಸರ್ಕಾರ ತರಾತುರಿಯಲ್ಲಿ ರಚಿಸುವ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಮರಾಠಾ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಎಂದು ಮರುನಾಮಕರಣ ಮಾಡಬೇಕು. ಈ ಪ್ರಾಧಿಕಾರದ ಮೂಲಕ ರಾಜ್ಯದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪೂರಕ ವಾತಾವರಣ ನಿರ್ವಿುಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts