More

    ವಿವಾಹ ನೋಂದಣಿ ಮತ್ತಷ್ಟು ಜನಸ್ನೇಹಿ

    ಬೆಂಗಳೂರು: ವಿವಾಹ ನೋಂದಣಿ ಪ್ರಕ್ರಿಯೆ ಸರಳೀಕರಣಗೊಳಿಸಲು ಮುಂದಾಗಿರುವ ಸರ್ಕಾರ, ಹಿಂದೂ ವಿವಾಹಗಳ ನೋಂದಣಿ (ಕರ್ನಾಟಕ) (ತಿದ್ದುಪಡಿ) ನಿಯಮಗಳು, 2024ಕ್ಕೆ ಶಾಸನ ಸಭೆಯಲ್ಲಿ ಅನುಮೋದನೆ ಪಡೆಯಲು ನಿರ್ಧರಿದೆ. ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಕೈಗೊಳ್ಳಲಾಗುತ್ತಿತ್ತು. ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿ ಜನಸ್ನೇಹಿಯಾಗಿಸಲು ಕಾವೇರಿ-2.0 ತಂತ್ರಾಂಶದಲ್ಲಿ ಆನ್​ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಸಂಗತಿಯನ್ನು ಮುಖ್ಯಮಂತ್ರಿಯವರು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದರು.

    ಐಟಿಐಗೆ 100 ಕೋಟಿ ರೂ.: ಆರು ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸಲು ನಿರ್ಧರಿಸಲಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವ್ಯಾಪ್ತಿಗೆ ಬರುವ ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 52.81 ಕೋಟಿ ರೂ. ವೆಚ್ಚದಲ್ಲಿ ಹಾಗೂ ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 47.18 ಕೋಟಿ ರೂ. ಒದಗಿಸಲಾಗುತ್ತದೆ ಈ ಅನುದಾನದಲ್ಲಿ ಕಟ್ಟಡ ಕಾಮಗಾರಿ ಮತ್ತು ಯಂತ್ರೋಪಕರಣ ಹಾಗೂ ಪೀಠೋಪಕರಣ ಒದಗಿಸುವುದರ ಮೂಲಕ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ.

    ಕರ್ನಾಟಕ ಪಬ್ಲಿಕ್ ಶಾಲೆಗೆ ಒತ್ತು: 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿನ 104 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಒಟ್ಟು 60 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳ ಪೈಕಿ 71 ತಾಲೂಕುಗಳಲ್ಲಿ 82 ಕರ್ನಾಟಕ ಪಬ್ಲಿಕ್ ಶಾಲೆಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದು, ಉಳಿದ 22 ತಾಲೂಕುಗಳಲ್ಲಿ ತಲಾ ಒಂದು ಕರ್ನಾಟಕ ಪಬ್ಲಿಕ್ ಶಾಲೆ ಹೊಸದಾಗಿ ಗುರುತಿಸುವ ಹಾಗೂ ಈಗಾಗಲೇ ಗುರುತಿಸಲಾಗಿರುವ 82 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಪಡಿಸಲು ಲರ್ನಿಂಗ್ ಕಾಂಪೋನೆಂಟ್ಸ್ ಅಗತ್ಯತೆ ಇದೆ ಎಂದು ಪ್ರಸ್ತಾಪಿಸಲಾಗಿದೆ.

    ಆರು ಕಡೆ ಶೀತಲ ಗೃಹ ನಿರ್ವಣ: ತೋಟಗಾರಿಕೆ ಇಲಾಖೆಯು ಆರ್​ಐಡಿಎಫ್-29ರಡಿ 65 ಕೋಟಿ ರೂ. ವೆಚ್ಚದಲ್ಲಿ 14000 ಮೆಟ್ರಿಕ್ ಟನ್ ಸಾಮರ್ಥ್ಯದ 6 ಶೀತಲ ಗೃಹಗಳನ್ನು 6 ಜಿಲ್ಲೆಗಳಲ್ಲಿ ಸ್ಥಾಪಿಸಲು ನಬಾರ್ಡ್ ನಿಂದ ಪಡೆದಿರುವ ತಾತ್ವಿಕ ಮಂಜೂರಾತಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 34.03 ಲಕ್ಷ ಮೆಟ್ರಿಕ್ ಟನ್ ಉತ್ಪನ್ನ ಸಂಗ್ರಹಿಸಲು ಅಂದಾಜಿಸಲಾಗಿದೆ. ಆಲೂಗಡ್ಡೆ, ಮೆಣಸಿನಕಾಯಿ, ಶುಂಠಿ, ಅರಿಸಿನ, ಕರಿಮೆಣಸು, ನಿಂಬೆ, ಒಣದ್ರಾಕ್ಷಿ, ಕೊತ್ತಂಬರಿ ಇತ್ಯಾದಿ ಸಂಗ್ರಹಿಸಲು ಅನುಕೂಲವಾಗಲಿದೆ. ್ಝ ಹಾವೇರಿ – ರಾಣೆಬೆನ್ನೂರು ತಾಲೂಕು ಹನುಮನಮಟ್ಟಿ ಫಾರಂ ್ಝ ಕೋಲಾರ- ಮಾಲೂರು ತಾಲೂಕು, ಚಾವ್ವೇನಹಳ್ಳಿ. ್ಝ ಮಂಡ್ಯ- ಕೆ.ಆರ್.ಪೇಟೆ ತಾಲೂಕು, ಮುರುಕನಹಳ್ಳಿ. ್ಝ ಶಿವಮೊಗ್ಗ- ಶಿಕಾರಿಪುರ ತಾಲೂಕು ಕಾಳೇನಹಳ್ಳಿ. ್ಝ ಹಾಸನ- ಸಂತೇ ಪೇಟೆಯ ಎಪಿಎಂಸಿ ಯಾರ್ಡ್. ್ಝ ವಿಜಯಪುರ- ಅರಕೇರೆ.

    ಕ್ರೀಡಾಪಟುಗಳಿಗೆ ಶೇ.2 ಮೀಸಲು: ರಾಷ್ಟ್ರಮಟ್ಟ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಗಣನೀಯ ಸಾಧನೆ ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಶೇ.2 ಸಮತಳ ಮೀಸಲಾತಿಯನ್ನು ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ. ನಿಯಮಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ, ಪ್ರಕಟಿಸಿದ 15 ದಿನಗಳ ಒಳಗಾಗಿ ಆದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಆಕ್ಷೇಪಣೆ ಸಲಹೆಗಳನ್ನು ಆಹ್ವಾನಿಸಲಾಗುತ್ತದೆ. ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ, ಸಲಹೆಗಳು ಸ್ವೀಕೃತವಾಗದೇ ಇದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ, ಸಲಹೆಗಳು ಗುರುತರವಾಗಿರದೇ ಇದ್ದಲ್ಲಿ ಪುನಃ ಸಚಿವ ಸಂಪುಟದ ಅನುಮೋದನೆಗಾಗಿ ಮಂಡಿಸದೇ ಸದರಿ ಕರಡು ನಿಯಮಗಳನ್ನು ಅಂತಿಮವಾಗಿ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.

    ಜಿಲ್ಲಾವಾರು ಪ್ರಮುಖ ಸಂಗತಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಡಿಡಿ ಕಲಬುರಗಿ ಮತ್ತು ಮೈಸೂರಿನಲ್ಲಿ ಆಲೈಡ್ ಹೆಲ್ತ್ ಸೈನ್ಸ್​ಸ್ ಕಾಲೇಜು ಹಾಗೂ ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರ ಕಚೇರಿ ಸ್ಥಾಪನೆ, ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯ, ಸಂಶೋಧನಾ ಕೇಂದ್ರ ಇರಲಿದೆ. ಕಲಬುರಗಿ ಮತ್ತು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಸುಟ್ಟ ಗಾಯಗಳ ಘಟಕ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿ ಮೂಲ ಸೌಕರ್ಯಕ್ಕೆ 31.54 ಕೋಟಿ ರೂ. ಅನುದಾನ.

    ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ 142.47 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ. ್ಝ ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ ನಿರ್ಮಾಣ ಕಾಮಗಾರಿಗೆ 47.32 ಕೋಟಿ ರೂ. ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

    ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಹೊಸ ವೈದ್ಯಕೀಯ ಕಾಲೇಜು, ಹಾಸ್ಟೆಲ್, ಬೋಧಕ, ಸಿಬ್ಬಂದಿ ವಸತಿ ನಿಲಯಗಳ ಕಟ್ಟಡ ಕಾಮಗಾರಿಗೆ 461 ಕೋಟಿ ರೂ. ್ಝಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಕಾಲೇಜು, ಹಾಸ್ಟೆಲ್, ಸಿಬ್ಬಂದಿ ವಸತಿ ನಿಲಯ ಕಟ್ಟಡ ಕಾಮಗಾರಿಗೆ 455 ಕೋಟಿ ರೂ. ್ಝ ಕಲಬುರಗಿ ಮೆಡಿಕಲ್ ಕಾಲೇಜು ಆವರಣದಲ್ಲಿ 300 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ 126.90 ಕೋಟಿ ರೂ.

    ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಕಾಲೇಜು, ಹಾಸ್ಟೆಲ್, ವಸತಿ ನಿಲಯ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ 499 ಕೋಟಿ ರೂ.ಗೆ ಒಪ್ಪಿಗೆ, ಬೆಳಗಾವಿ ತಾಲೂಕಿನ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯಲ್ಲಿನ 20 ಕೆರೆಗಳನ್ನು ತುಂಬಿಸುವ 287.55 ಕೋಟಿ ರೂ. ವಿವರ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.

    ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ 61 ಕೆರೆ ತುಂಬಿಸುವ ಬಾಗೇವಾಡಿ ಕೆರೆ ತುಂಬಿಸುವ ಯೋಜನೆಯ 519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ. ್ಝಾಯಚೂರು ತಾಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ, ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಯ 158.10 ಕೋಟಿ ರೂ. ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.

    ಪ್ರಮುಖ ಸಂಗತಿ

    9 ಕಡೆ ಪರಿಶಿಷ್ಟರ ಹಾಸ್ಟೆಲ್: ಮಹತ್ವಾ ಕಾಂಕ್ಷೆಯ ತಾಲೂಕುಗಳಲ್ಲಿ 9 ಪರಿಶಿಷ್ಟ ಜಾತಿ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗೆ 63 ಕೋಟಿ ರೂ. ನೀಡಲು ಅನುಮೋದನೆ ನೀಡಲಾಗಿದೆ.

    ಸಹಕಾರ ಸಮೃದ್ಧಿ: ಸಹಕಾರ ಸಂಘಗಳ ನಿಬಂಧಕರ ಕಚೇರಿ ಆವರಣದಲ್ಲಿ ಸಹಕಾರ ಸಮೃದ್ಧಿ ಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ 14.85 ಕೋಟಿ ರೂ.ವನ್ನು ಸಹಕಾರ ಅಭಿವೃದ್ದಿ ನಿಧಿಯಿಂದ ಭರಿಸುವುದಕ್ಕೆ ಒಪ್ಪಿಗೆ.

    34 ಕಡೆ ಚಿತಾಗಾರ: 10 ಮಹಾನಗರ ಪಾಲಿಕೆ ಮತ್ತು ಆಯ್ದ 24 ನಗರಸಭೆಗಳಲ್ಲಿ ತಲಾ 1 ರಂತೆ ಒಟ್ಟು 34 ಆಧುನಿಕ ವಿದ್ಯುತ್, ಅನಿಲ ಚಿತಾಗಾರ ಸ್ಥಾಪಿಸಲು ಉದ್ದೇಶಿಸಲಾಗಿದೆ. 136 ರೂ. ವೆಚ್ಚ ಮಾಡಲಾಗುತ್ತಿದೆ.

    ಎರಡು ಸೀರೆ: ಕೇಂದ್ರದ ಅನುದಾನದ ನೆರವಿನಲ್ಲಿ 69899 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 67570 ಸಹಾಯಕಿಯರಿಗೆ ಸಮವಸ್ತ್ರವಾಗಿ ಒಬ್ಬರಿಗೆ 2 ಸೀರೆ ನೀಡಲು 13.75 ಕೋಟಿ ರೂ.

    ಅಧಿಕಾರಿಗಳ ವಿರುದ್ಧ ಕ್ರಮ: 2020-21 ರಿಂದ 2022-23ನೇ ಸಾಲಿನವರೆಗೆ 78 ಸಂಚಾರಿ ಆರೋಗ್ಯ ಘಟಕಗಳ ಸೇವೆಯನ್ನು ವಿವಿಧ ಸೇವಾದಾರರಿಂದ ಪಡೆದಿದೆ, ಅವರಿಗೆ ಬಾಕಿ ಪಾವತಿ ಮಾಡುವ ಜತೆ ಸರ್ಕಾರ ಹಾಗೂ ಇಲಾಖಾ ಮುಖ್ಯಸ್ಥರ ಅನುಮತಿ ಇಲ್ಲದೇ ಸಂಚಾರಿ ಆರೋಗ್ಯ ಘಟಕಗಳನ್ನು ಮುಂದುವರಿಸಲು ಕಾರಣರಾದ ಅಧಿಕಾರಿ ವಿರುದ್ಧ ನಿಯಮಾನುಸಾರ ಸೂಕ್ತ ಶಿಸ್ತುಕ್ರಮ ಕೈಗೊಂಡು ಆಗಿರುವ ನಷ್ಟವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಲು ಸಂಪುಟ ನಿರ್ಧರಿಸಿದೆ.

    3 ಸಾವಿರ ರೂ. ಲಂಚ ಪಡೆದು ಕೆಲಸ ಕಳೆದುಕೊಂಡ ಅಧಿಕಾರಿ!: ಮೂರು ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಇಲಾಖಾ ವಿಚಾರಣೆಯಲ್ಲಿ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಡಾ.ಜಿ ಅಭಯ್ ಕುಮಾರ್ ಎಂಬುರನ್ನು ಸರ್ಕಾರ ಕಡ್ಡಾಯ ನಿವೃತ್ತಿ ಗೊಳಿಸಿದೆ. ಯಾದಗಿರಿ ಜಿಲ್ಲೆ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಯಾಗಿದ್ದ ಡಾ ಜಿ. ಅಭಯ ಕುಮಾರ್, ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು, ಅವರ ಮೇಲೆ ಕ್ರಮಕೈಗೊಳ್ಳುವಂತೆ ಉಪ ಲೋಕಾಯುಕ್ತರು ಶಿಫಾರಸು ಮಾಡಿದ್ದರು. ಈ ಪ್ರಕಾರ ಸಂಪುಟ ಸಭೆಯಲ್ಲಿ ಕಡ್ಡಾಯ ನಿವೃತ್ತಿಗೊಳಿಸಲು ತೀರ್ಮಾನ ಕೈಗೊಳ್ಳಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts