

ಬೆಂಗಳೂರು: ಪತಿ ಮತ್ತು ಆತನ ಗರ್ಲ್ಫ್ರೆಂಡ್ ವಿರುದ್ಧ ಡೆತ್ನೋಟ್ ಬರೆದಿಟ್ಟು ಗೃಹಿಣಿಯೊಬ್ಬರು ಸಾವಿನ ಹಾದಿ ಹಿಡಿದಿರುವ ಮನಕಲಕುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಜುಲೈ 2ರಂದು ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪವಿತ್ರಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಈಕೆ ಹೆಗ್ಗನಹಳ್ಳಿಯ ನಿವಾಸಿ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಬದುಕು ಅಂತ್ಯಗೊಳಿಸಿದ್ದಾಳೆ. ಡೆತ್ನೋಟ್ ಬರೆದು, ಅದನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಹಾಕಿ ನೇಣಿಗೆ ಶರಣಾಗಿದ್ದಾಳೆ.
ಮೊದಲ ಪತಿಗೆ ವಿಚ್ಛೇದನ ನೀಡಿದ್ದ ಪವಿತ್ರಾ, ಚೇತನ್ ಗೌಡ ಎಂಬಾತನನ್ನು ಎರಡನೇ ವಿವಾಹವಾಗಿದ್ದಳು. ಚೇತನ್, ಸುಮುಖ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕನಾಗಿದ್ದಾನೆ. ಇತ್ತೀಚೆಗೆ ಚೇತನ್ಗೆ ಮತ್ತೊರ್ವ ಯುವತಿಯ ಸಂಪರ್ಕ ಬೆಳೆದಿದ್ದು, ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಈ ಬಗ್ಗೆ ತನ್ನ ತಾಯಿ ಪದ್ಮಮ್ಮ ಬಳಿ ಪವಿತ್ರ ತಿಳಿಸಿದ್ದಳು.
ಎಷ್ಟೇ ಹೇಳಿದರೂ ಗಂಡನ ಬುದ್ಧಿ ಬದಲಾಗದ ಹಿನ್ನೆಲೆಯಲ್ಲಿ ಕಡೆಗೆ ಮನನೊಂದು, ಡೆತ್ನೋಟ್ ಬರೆದು, ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿ ಸಾವಿಗೆ ಶರಣಾಗಿದ್ದಾಳೆ. ಮಗಳ ಸ್ಟೇಟಸ್ನಲ್ಲಿದ್ದ ಡೆತ್ನೋಟ್ ನೋಡಿ ತಾಯಿ ಪದ್ಮಮ್ಮ ಮನೆಗೆ ಬಂದಾಗ ಮಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಎಫ್ಐಆರ್ ದಾಖಲಾಗಿದೆ. ಮೃತಳ ತಾಯಿ ಪದ್ಮಮ್ಮ ಅವರ ದೂರಿನನ್ವಯ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆ ಪ್ರಚೋದನೆ ಅಡಿ ದೂರು ದಾಖಲಾಗಿದ್ದು, ಡೆತ್ನೋಟ್ ಹಾಗೂ ಮೃತಳ ಎರಡು ಪೋನ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್)