ಸಿನಿಮಾ

ವಿವಾಹಿತೆ ಜೊತೆ ಕಾಣಿಸಿಕೊಂಡ ಪ್ರಿಯಕರ; ಚಪ್ಪಲಿಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಭೋಪಾಲ್​: ಭಾರತ ದೇಶದಲ್ಲಿ ಸಂಸ್ಕೃತಿ ಹಾಗೂ ಸಂಬಂಧಗಳಿಗೆ ಹೆಚ್ಚಿಬನ ಬೆಲೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇದಕ್ಕೆ ಬೆಲೆ ಇಲ್ಲದಂತಾಗಿದೆ. ಅದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ ಘಟನೆ ಒಂದು ನಡೆದಿದೆ.

ಘಟನೆ ಒಂದರಲ್ಲಿ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗೆ ಗ್ರಾಮಸ್ಥರು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್​ನಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಖಂಡನೆಗೆ ಗುರಿಯಾಗಿದ್ದು ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪರಪುರುಷನೊಂದಿಗೆ ಇದ್ದಾಳೆಂದು ಆರೋಪ

ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುತ್ತಿರುವುದು ಕಂಡು ಬರುತ್ತದೆ.

Garlanded With Shoes (1)

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮಸ್ಥರು ಆತ ಆಕೆಯ ಪತಿಯಲ್ಲ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಕಾರಣ ಮುಂದೆ ಈಗೆ ಮಾಡಬಾರದೆಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಲ್ಲಿ ಗೂಡ್ಸ್​ ರೈಲು ಡಿಕ್ಕಿ ಹೊಡೆದು 17 ಎಮ್ಮೆಗಳು ಮೃತ್ಯು

ದೂರು ದಾಖಲಿಸಿಲ್ಲ

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಭಿಜಿತ್​ ಕುಮಾರ್​ ರಂಜನ್​ ಘಟನೆಯ ವಿಡಿಯೋವನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ ನಂತರ ನಮ್ಮ ಗಮನಕ್ಕೆ ಬಂದಿದೆ.

ವಿವಾಹಿತ ಮಹಿಳೆ, ಆಕೆಯ ಪತಿ ಹಾಗೂ ಪ್ರಿಯಕರನ ನಡುವೆ ಜಗಳವಾದ ಕಾರಣ ಗ್ರಾಮಸ್ಥರು ಮದ್ಯಪ್ರವೇಶಿಸಿ ಶಿಕ್ಷೆ ವಿಧಿಸಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ದೂರು ದಾಖಲಾಗಿಲ್ಲ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದು ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Latest Posts

ಲೈಫ್‌ಸ್ಟೈಲ್