ಮಮದಾಪುರ: ಸಮೀಪದ ಚಿಕ್ಕನಂದಿ ಗ್ರಾಮದಲ್ಲಿ ಮೇ 28 ರಿಂದ 29ರ ವರೆಗೆ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ. ಮೇ 28ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಮಾರುತೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಪುಷ್ಪಾಲಂಕಾರ ಹಾಗೂ ಗ್ರಾಮದ ಎಲ್ಲ ದೇವರಿಗೆ ವಿಶೇಷ ಪೂಜೆ ಜರುಗಲಿದೆ. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮ, ಗ್ರಾಮಸ್ಥರಿಂದ ನೈವೇದ್ಯ ಅರ್ಪಣೆ, ಮಹಾಪ್ರಸಾದ ನಡೆಯಲಿದೆ. ಸಂಜೆ ಶ್ರೀ ಮಾರುತೇಶ್ವರ ಪಲ್ಲಕ್ಕಿಯೊಂದಿಗೆ ಗ್ರಾಮದ ಎಲ್ಲ ದೇವತೆಗಳ ಪಲ್ಲಕ್ಕಿ ಉತ್ಸವ ಜರುಗಲಿದೆ. ರಾತ್ರಿ 10.30ಕ್ಕೆ “ಕೆರಳಿದ ಅವಳಿ ಸರ್ಪಗಳು’ ಎಂಬ ಸಾಮಾಜಿಕ ನಾಟಕ ಪ್ರದರ್ಶಗೊಳ್ಳಲಿದೆ. ಮೇ 29ರಂದು ಮಧ್ಯಾಹ್ನ 1 ಗಂಟೆಗೆ ಕುಸ್ತಿ ಪಂದ್ಯಾವಳಿ ನಡೆಯಲಿವೆ. ರಾತ್ರಿ 10ಕ್ಕೆ “ಧರ್ಮದ ನುಡಿ ಬೆಂಕಿಯ ಕಿಡಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರುತೇಶ್ವರ ಜಾತ್ರೋತ್ಸವ ನಾಳೆಯಿಂದ

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…