ಮಕ್ಕಳ ಭವಿಷ್ಯ ರೂಪಿಸುವುದು ಪಾಲಕರ ಕರ್ತವ್ಯ : ಶಿಕ್ಷಣ ತಜ್ಞ ಬಾಲಕೃಷ್ಣ ಪಿ. ಪ್ರತಿಪಾದನೆ

New Project (39)
Published on

ಕಿನ್ನಿಗೋಳಿ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸುವ ಜವಾಬ್ದಾರಿ ಪಾಲಕರದ್ದು ಎಂದು ಶಿಕ್ಷಣ ತಜ್ಞ ಬಾಲಕೃಷ್ಣ ಪಿ. ಹೇಳಿದರು. ಮೇರಿವೇಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯಲ್ಲಿ ಮಾತನಾಡಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಡೋನ ಸಾಂಕ್ತಿಸ್, ಮೇರಿವೆಲ್ ಕಾನ್ವೆಂಟ್‌ನ ಮುಖ್ಯಸ್ಥೆ ಪ್ರೇಮಲತಾ ಬಿ.ಎಸ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಹೀರಾ ವಾಸ್, ಸತೀಶ್ ಸಾಲ್ಯಾನ್, ಉಪ ಮುಖ್ಯಶಿಕ್ಷಕಿ ಸೆಲಿನ್ ಪೇತ್ರಾ, ಮುಖ್ಯಶಿಕ್ಷಕಿ ಶಾಂತಿ ಫ್ಲಾವಿಯಾ ಬಿ.ಎಸ್. ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಶ್ವಿನಿ ವಂದಿಸಿದರು. ಸಹಶಿಕ್ಷಕಿ ವಿನೋದಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net