More

    ಮಾಸ್ಕ್ ವಿತರಿಸಿ ಪೊಲೀಸರಿಂದ ಜಾಗೃತಿ

    ಶಿವಮೊಗ್ಗ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿರುವ ಪೊಲೀಸರು, ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ 300 ಮಾಸ್ಕ್‌ಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
    ಎಎಸ್ಪಿ ಡಾ. ಎಚ್.ಟಿ.ಶೇಖರ್ ನೇತೃತ್ವದಲ್ಲಿ ಪೊಲೀಸರು ಸೋಮವಾರ ಖಾಸಗಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪ್ರಯಾಣಿಕರಲ್ಲಿ ಕರೊನಾ ಬಗ್ಗೆ ಎಚ್ಚರಿಕೆ ನೀಡಿದರು.
    ಪೊಲೀಸರನ್ನು ಕಂಡೊಡನೆ ಬಾಯಿಗೆ ಬಟ್ಟೆ ಸುತ್ತಿಕೊಂಡ ವ್ಯಕ್ತಿಯೊಬ್ಬರಿಗೆ ನೀವು ಈಗ ಬಟ್ಟೆ ಸುತ್ತಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದರೆ ಕರೊನಾದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಎಸ್ಪಿ ತಿಳಿವಳಿಕೆ ನೀಡಿದರು.
    ಮಾಸ್ಕ್ ಇಲ್ಲದೆ ನಡೆಯುತ್ತಿದ್ದ ಕುಟುಂಬದ ಸದಸ್ಯರಿಗೆ ಮಾಸ್ಕ್ ವಿತರಿಸಿದ ಅವರು, ಮಕ್ಕಳಿಗೆ ಸ್ವತಃ ಮಾಸ್ಕ್ ತೊಡಿಸಿ ಕರೊನಾ ಬಗ್ಗೆ ನಿರ್ಲಕ್ಷೃ ಜೀವಕ್ಕೆ ಅಪಾಯ ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದರು. ನಿಲ್ದಾಣದಲ್ಲಿದ್ದ ಬಸ್‌ಗಳಿಗೆ ಹತ್ತಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ, ಪರಸ್ಪರ ಅಂತರ ಕಾಯ್ದುಕೊಳ್ಳುವ ಬಗ್ಗೆ ತಿಳಿವಳಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts