More

    ಸಾರ್ವಜನಿಕರೇ.. ಬಿಎಂಟಿಸಿಯಲ್ಲಿ ಮಾಸ್ಕ್ ಕಡ್ಡಾಯ; ತಕ್ಷಣದಿಂದಲೇ ಜಾರಿ..

    ಬೆಂಗಳೂರು: ಕೋವಿಡ್​-19 ಹೊಸ ವೇರಿಯಂಟ್ ಹಿನ್ನೆಲೆಯಲ್ಲಿ ದೇಶಾದ್ಯಂತ ಮತ್ತೆ ಕರೊನಾ ಭಯ ಆವರಿಸಿದ್ದು, ಎಲ್ಲೆಡೆ ಮತ್ತೆ ಕೋವಿಡ್​ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

    ಪ್ರಸ್ತುತ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವುದರಿಂದ ಹಾಗೂ ಮುಂಬರುವ ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಸಂದರ್ಭಗಳಲ್ಲಿ ಎಚ್ಚರ ವಹಿಸುವ ಅಗತ್ಯವಿದೆ. ಅಲ್ಲದೆ ಸಾಮೂಹಿಕ ಸಾರಿಗೆ ಪ್ರಯಾಣದ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ನೌಕರರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸತಕ್ಕದ್ದು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಮನೆಗಳ ಸಮೀಪದ ತೆರೆದ ಜಾಗದಲ್ಲಿ ಶವಸಂಸ್ಕಾರ; ನಿವಾಸಿಗರಿಗೆ ಕೋವಿಡ್ ಭಯ

    ಸೂಚನೆಗಳು

    1. ಚಾಲನಾ ಸಿಬ್ಬಂದಿ ಒಳಗೊಂಡಂತೆ ಸಂಸ್ಥೆಯ ಎಲ್ಲಾ ವರ್ಗದ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ (ಮುಖಗವಸು) ಧರಿಸಿ ಕರ್ತವ್ಯ ನಿರ್ವಹಿಸುವುದು.
    2. ಸಾಮಾಜಿಕ ಅಂತರ ಕಾಪಾಡಿಕೊಂಡು ಕರ್ತವ್ಯ ನಿರ್ವಹಿಸುವುದು. 3. ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರು ಸಹ ಮಾಸ್ಕ್ ಧರಿಸಿರತಕ್ಕದ್ದು. ಅಕಸ್ಮಾತ್ ಮಾಸ್ಕ್ ಹಾಕದೆ ಇದ್ದಲ್ಲಿ ಅಂತಹ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಮಾಸ್ಕ್ ಹಾಕಲು ತಿಳಿಸತಕ್ಕದ್ದು. 4. ಶೀತಜ್ವರದ ಅನಾರೋಗ್ಯ ಮತ್ತು ತೀವ್ರ ಉಸಿರಾಟದ ಸೋಂಕಿನ ಲಕ್ಷಣಗಳು ಗೋಚರಿಸಿದ ತಕ್ಷಣ ಕೋವಿಡ್-19 ತಪಾಸಣೆಗೊಳಪಟ್ಟು, ಪರೀಕ್ಷೆ ವರದಿ ಬರುವವರೆಗೆ ಕಡ್ಡಾಯವಾಗಿ ಮನೆಯಲ್ಲಿ ಪ್ರತ್ಯೇಕವಾಗಿರತಕ್ಕದ್ದು.
    5. ಈಗಾಗಲೇ 1 ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ಪಡೆದು ಬೂಸ್ಟರ್ ಡೋಸ್ ಪಡೆಯದೆ ಇರುವವರು ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳುವುದು.

    ಈ ಎಲ್ಲ ಸೂಚನೆಗಳು ತಕ್ಷಣದಿಂದ ಜಾರಿಗೆ ಬರುತ್ತವೆ.

    ಕರೊನಾ ರೋಗಿಗಳನ್ನು ನೋಡುತ್ತಲೇ ಸುಸ್ತಾಗಿ ಕುಸಿದುಬಿದ್ದ ಡಾಕ್ಟರ್​: ವಿಡಿಯೋ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts