ಬಿಜೆಪಿ ಶಾಸಕನಿಂದ ದಂಡ ವಸೂಲಿ ಮಾಡಿದ ಪೊಲೀಸರಿಗೆ ಎದುರಾಯ್ತು ಸಂಕಷ್ಟ!

mp kumaraswamy
Published on

ಬೆಂಗಳೂರು: ಕಾರಿನಲ್ಲಿ ಮಾಸ್ಕ್ ರಹಿತ ಪ್ರಯಾಣ ಮಾಡಿದ್ದಕ್ಕೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಮಾಸ್ಕ್ ಹಾಕಿಲ್ಲವೆಂದು ಶಾಸಕರಿಗೆ ಶೇಷಾದ್ರಿಪುರಂ ಸಂಚಾರಿ ಪೊಲೀಸರು ಮೂಡಿಗೆರೆ ಶಾಸಕರಿಂದ 250 ರೂಪಾಯಿ ದಂಡ ವಸೂಲಿ ಮಾಡಿದ್ದು, ಈ ಬಗ್ಗೆ ಆಕ್ರೋಶ ಹೊರಹಾಕಿರುವ ಎಂ.ಪಿ.ಕುಮಾರಸ್ವಾಮಿ, ಪೊಲೀಸರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದಾರೆ. ಇದನ್ನೂ ಓದಿರಿ ರಾಜ್ಯದ ಒಂದೇ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ ಕರೊನಾ ಪಾಸಿಟಿವ್​

'ಇಂದು(ಡಿ.24) ನಾನು ಬಾಡಿಗೆ ಕಾರಿನಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಕಡೆಯಿಂದ ಶಾಸಕ ಭವನಕ್ಕೆ ತೆರಳುತ್ತಿದ್ದೆ. ಆಗ ಶೇಷಾದ್ರಿಪುರಂ ಪೊಲೀಸ್​ ಠಾಣೆ ಮುಂಭಾಗ ಸಂಚಾರಿ ವ್ಯತ್ಯಯದಿಂದ ಕಾರು ನಿಲುಗಡೆಯಾಗಿತ್ತು. ಆ ವೇಳೆ ಕಾರಿನ ಟಿಂಟ್​ ಗ್ಲಾಸ್​ ಇಳಿಸುವಂತೆ ಬಲವಂತವಾಗಿ ಒತ್ತಡ ಹೇರಿ ಕಾರಿನೊಳಗೆ ಇದ್ದ ನನಗೆ ಮಾಸ್ಕ್​ ಹಾಕಿದ್ದರೂ 250 ರೂಪಾಯಿ ದಂಡ ವಿಧಿಸಿದ್ದಾರೆ. ಪೊಲೀಸರ ಈ ವರ್ತನೆಯಿಂದ ಮುಜುಗರಕ್ಕೊಳಗಾದ ನಾನು ಜವಾಬ್ದಾರಿಯುತ ವ್ಯಕ್ತಿಯಾಗಿ ಅವರಿಗೆ ಮರು ಮಾತನಾಡದೆ ದಂಡ ಕಟ್ಟಿದೆ. ವಿನಾ ಕಾರಣ ನನ್ನ ಮೇಲೆ ದಂಡ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ಶಾಸಕರು ವಿವರಿಸಿದ್ದಾರೆ.

ಈ ವಿವರವುಳ್ಳ ದೂರಿನ ಪತ್ರವನ್ನು ಗೃಹ ಸಚಿವರಿಗೆ ಕಳಿಸಿರುವ ಶಾಸಕರು, ಮಾಸ್ಕ್​ ಧರಿಸದ್ದರೂ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net