More

    ಮಾಸ್ಕ್ ಧಾರಣೆ ಎಲ್ಲರ ಕರ್ತವ್ಯ

    ಬೈಲಹೊಂಗಲ: ಪರಸ್ಪರ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಜತೆಗೆ ಮಾಸ್ಕ್ ಧರಿಸಿದರೆ ಮಾತ್ರ ಕರೊನಾ ಸೋಂಕು ನಿಯಂತ್ರಿಸಬಹುದು. ಆದ್ದರಿಂದ ಎಲ್ಲರೂ ಮಾಸ್ಕ್ ಧಾರಣೆ ಕರ್ತವ್ಯವೆಂದು ತಿಳಿಯಬೇಕು ಎಂದು ತಹಸೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಹೇಳಿದರು.

    ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗುರುವಾರ ತಾಲೂಕು ಆಡಳಿತ, ಪುರಸಭೆ, ಪೊಲೀಸ್ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಮಾಸ್ಕ್ ದಿನಾಚಾರಣೆ ನಿಮಿತ್ತ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸರ್ಕಾರದ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಪುರಸಭೆ ಮುಖ್ಯಾಧಿಕಾರಿ ಕೆ.ವೈ.ನಾಗನೂರು, ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್‌ಐ ಈರಪ್ಪ ರಿತ್ತಿ, ಶಿಶು ಅಭಿವೃದ್ಧಿ ಅಧಿಕಾರಿ ಮಹಾಂತೇಶ ಭಜಂತ್ರಿ, ಆರೋಗ್ಯ ಸಹಾಯಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿಯರು ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಬಳಿಕ ಎನ್‌ಪಿಎಸ್ ಶಿಕ್ಷಕರ ಘಟಕದಿಂದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts