More

    ಸಾರ್ವಜನಿಕರಿಗೆ ತೊಂದರೆಯಗದಂತೆ ಕಾಮಗಾರಿ ಕೈಗೊಳ್ಳಿ

    ಮಸ್ಕಿ: ಪಟ್ಟಣದಲ್ಲಿ ಕೇಂದ್ರ ಸರ್ಕಾರದ 10 ಕೋಟಿ ರೂ. ವೆಚ್ಚದಲ್ಲಿ 2 ಕಿ.ಮೀ. ಡಿವೈಡರ್, ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದ್ದು, ಜೆಸ್ಕಾಂ ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೂಚಿಸಿದರು.

    ಪುರಸಭೆ ಸಭಾಂಗಣದಲ್ಲಿ ಪುರಸಭೆ ಹಾಗೂ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು. ಕೇಂದ್ರ ಸರ್ಕಾರ 185 ಕೋಟಿ ವೆಚ್ಚದಲ್ಲಿ ಲಿಂಗಸುಗೂರು ತಾಲೂಕಿನ ಹೊನ್ನಳ್ಳಿಯಿಂದ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್‌ವರೆಗೆ ರಸ್ತೆ ಅಭಿವೃದ್ಧಿ ಹಾಗೂ ಮಸ್ಕಿಯಲ್ಲಿ ಡಿವೈಡರ್, ಚರಂಡಿ, ಪಾದಚಾರಿ ರಸ್ತೆ, ಸರ್ವಿಸ್ ರಸ್ತೆ, ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.

    ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಕಾಮಗಾರಿ ಕೈಗೊಳ್ಳಬೇಕೆಂದು ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಅಶೋಕ ವೃತ್ತ, ಹಳೆ ಬಸ್ ನಿಲ್ದಾಣ, ವಾಲ್ಮೀಕಿ ವೃತ್ತ ಹಾಗೂ ಬಸವ ವೃತ್ತದಲ್ಲಿ ಬಸ್ ಶೆಲ್ಟರ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ, ಜೆಸ್ಕಾಂ ಅಧಿಕಾರಿಗಳು ಕೂಡಲೇ ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬ, ಡಬ್ಬಾ ಅಂಗಡಿಗಳನ್ನು ತೆರವು ಮಾಡಿಸಬೇಕು. ನಾಲ್ಕು ತಿಂಗಳಲ್ಲಿ ಪಟ್ಟಣದ ರಸ್ತೆ ಕಾಮಗಾರಿ ಮುಗಿಯಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರಿಗೆ ಸಹಕಾರ ನೀಡಬೇಕೆಂದು ಸಂಗಣ್ಣ ಕರಡಿ ತಿಳಿಸಿದರು.

    ತಹಸೀಲ್ದಾರ್ ಸುಧಾ ಅರಮನೆ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಹೆದ್ದಾರಿ ಪ್ರಾಧಿಕಾರದ ಇಂಜನಿಯರ್ ಡಿ.ಎಂ. ಮೇಲಿನಮನೆ, ಗೋಪಾಲ ಯಮನೂರು, ಗುತ್ತಿಗೆದಾರ ಶ್ರೀನಿವಾಸ್ ಅಮ್ಮಾಪೂರ, ಜೆಸ್ಕಾಂ ಎಇಇ ವೆಂಕಟೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts