More

    400ಕ್ಕೂ ಹೆಚ್ಚು ಕುಟುಂಬಗಳಿಗೆ ಅಭದ್ರತೆ

    ತ್ವರಿತ ಹಕ್ಕುಪತ್ರ ನೀಡುವಂತೆ ಮಸ್ಕಿ ಸೋಮನಾಥ ನಗರ ನಿವಾಸಿಗಳ ಆಗ್ರಹ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ

    ಮಸ್ಕಿ: ಪಟ್ಟಣದ 1 ಮತ್ತು 2 ನೇ ವಾರ್ಡ್‌ಗೆ ಒಳಪಡುವ ಸೋಮನಾಥ ನಗರದ ನಿವಾಸಿಗಳ ನಿವೇಶನ ಹಕ್ಕುಪತ್ರ ಸಮಸ್ಯೆ ಇತ್ಯರ್ಥಕ್ಕಾಗಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು.

    ಸೋಮನಾಥ ನಗರ ಹಿತರಕ್ಷಣಾ ಸಮಿತಿಯ ಪ್ರಮುಖ ಹನುಮಂತಪ್ಪ ವೆಂಕಟಾಪೂರ, ಮಲ್ಲಯ್ಯ ಬಳ್ಳಾ ಮಾತನಾಡಿ, 40 ವರ್ಷಗಳಿಂದ ಕೂಲಿ ಕಾರ್ಮಿಕರು ಗುಡಿಸಲು, ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಆದರೆ, ನೀರಾವರಿ ನಿಗಮ ಸೋಮನಾಥ ನಗರದ ಜಾಗ ಇಲಾಖೆಗೆ ಸೇರಿದ್ದು ಎಂದು ತಕರಾರು ಎತ್ತಿದ್ದಾರೆ. ಇದರಿಂದಾಗಿ ಹಲವಾರು ವರ್ಷಗಳಿಂದ ಜೀವನ ಸಾಗಿಸುತ್ತಿರುವ 400 ಕ್ಕೂ ಹೆಚ್ಚು ಕುಟುಂಬಗಳಿಗೆ ಅಭದ್ರತೆ ಕಾಡುತ್ತಿದೆ. ಕೂಡಲೇ ಹಕ್ಕು ಪತ್ರ ನೀಡಿ ಸರ್ಕಾರದ ಸೌಲಭ್ಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

    ನೀರಾವರಿ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯನಾರಾಯಣ ಶೆಟ್ಟಿ ಮಾತನಾಡಿ, ಪುರಸಭೆಯಿಂದ ಸರಿಯಾದ ರೀತಿಯಲ್ಲಿ ನಮಗೆ ಪ್ರಸ್ತಾವನೆ ಬಂದರೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ಇಲ್ಲಿಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮೊತ್ತೊಮ್ಮೆ ಪ್ರಸ್ತಾವನೆ ಸಿದ್ದಪಡಿಸಿ ಕಳುಹಿಸಿ. ನಾನು ಸರ್ಕಾರ ಹಾಗೂ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts