More

    ಹಕ್ಕು ಪತ್ರ ವಿತರಣೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ

    ಮಸ್ಕಿ: ಸೋಮನಾಥ ನಗರದಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ವಾಸಿಸುತ್ತಿರುವ ಕೂಲಿ ಕಾರ್ಮಿಕರಿಗೆ ಹಕ್ಕುಪತ್ರ ಹಂಚಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಅದು ಸರ್ಕಾರದ ಮಟ್ಟದಲ್ಲೇ ತೀರ್ಮಾನವಾಗಲಿದೆ ಎಂದು ನೀರಾವರಿ ನಿಗಮದ ಮುನಿರಬಾದ್ ವೃತ್ತ ಮುಖ್ಯ ಇಂಜಿನಿಯರ್ ಕೆ.ದುರುಗಣ್ಣ ಹೇಳಿದರು.

    ಪಟ್ಟಣದಲ್ಲಿ ಸೋಮವಾರ ಸೋಮನಾಥ ನಗರ, ತಾಲೂಕು ಆಡಳಿತ ಸೌಧ ಹಾಗೂ ಕೋರ್ಟ್ ನಿರ್ಮಾಣಕ್ಕೆ ನೀಡಬೇಕಾದ ಜಾಗ ಸೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗಗಳನ್ನು ಪರಿಶೀಲಿಸಿ ಮಾತನಾಡಿ, ಸೋಮನಾಥ ನಗರದಲ್ಲಿ ಹಲವು ಸಮಸ್ಯೆಗಳಿವೆ. ಕೆಲವರು ಸರ್ಕಾರಿ ಜಾಗದಲ್ಲಿ ವಾಣಿಜ್ಯ ಗೋದಾಮುಗಳನ್ನು ನಿರ್ಮಿಸಿದ್ದಾರೆ ಎಂದರು. ಅಲ್ಲಿ ವಾಸಿಸುವ ಬಡ ಕೂಲಿ ಕಾರ್ಮಿಕರ ಮನೆಗಳನ್ನು ಗುರುತಿಸಲಾಗಿದೆ. ಅಂತಹ ಕುಟುಂಬಗಳಿಗೆ ನಗರಾಭಿವೃದ್ಧಿ ಇಲಾಖೆ ಹಾಗೂ ನೀರಾವರಿ ನಿಗಮದ ಅಧಿಕಾರಿಗಳು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದರು.

    ಪಟ್ಟಣದ ಲಿಂಗಸುಗೂರು ರಸ್ತೆಯಲ್ಲಿರುವ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡುವಂತೆ ಕಂದಾಯ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಅದಕ್ಕೆ ಪರ್ಯಾಯವಾಗಿ ಹೂವಿನಬಾವಿಯಲ್ಲಿ ಜಾಗ ಕೊಡುವುದಾಗಿ ಕಂದಾಯ ಇಲಾಖೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಆದರೆ ಪಟ್ಟಣದಲ್ಲಿ ಬೆಲೆ ಬಾಳುವ ಜಾಗಕ್ಕೆ ಹೂವಿನಬಾವಿಯ ಜಾಗ ಸರಿಹೊಂದುವುದಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ಭೂಮಿ ಹಸ್ತಾಂತರ ಪ್ರಕ್ರಿಯೆ ನಡೆಸುವುದು ಸೂಕ್ತ ಎಂದರು.

    ಪಟ್ಟಣದಲ್ಲಿ ಕೋರ್ಟ್ ನಿರ್ಮಾಣಕ್ಕೆ 10 ಎಕರೆ ಜಾಗ ಕೇಳಿದ್ದಾರೆ. ಆ ಜಾಗವನ್ನು ನೀಡುವ ಸಂಬಂಧ ಇಲಾಖೆಯ ಅಧಿಕಾರಿಗಳ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನೀರಾವರಿ ನಿಗಮಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಯರಮರಸ್ ವಿಭಾಗದ ಸೂಪರಿಂಡೆಂಟ್ ಇಂಜಿನಿಯರ್ ವಿ.ರಮೇಶ, ಸಿಂಧನೂರು ವಿಭಾಗದ ಇಇ ಸತ್ಯನಾರಯಣ ಶೆಟ್ಟಿ, ಮಸ್ಕಿ ಉಪ ವಿಭಾಗದ ಎಇಇ ದಾವೂದ್ ಸಾಬ್, ಪ್ರದೀಪ್ ಮಲ್ಲಯ್ಯ ಕಟ್ಟಿಮನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts