More

    ವಾಸಿಸುವ ಸ್ಥಳದಲ್ಲೇ ಹಕ್ಕುಪತ್ರ ನೀಡಲು ಸೋಮನಾಥ ನಗರದ ನಿವಾಸಿಗಳ ಆಗ್ರಹ

    ಮಸ್ಕಿ: ಪಟ್ಟಣದ ಸೋಮನಾಥ ನಗರದ 400 ಕ್ಕೂ ಹೆಚ್ಚು ಕೂಲಿ ಕಾರ್ಮಿಕ ನಿವಾಸಿಗಳು ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಸೋಮನಾಥ ನಗರ ಹಿತರಕ್ಷಣ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಸೋಮನಾಥ ನಗರದಿಂದ ಹಳೇ ಬಸ್ ನಿಲ್ದಾಣದ ಅಂಬೇಡ್ಕರ್ ಪ್ರತಿಮೆ ಸ್ಳಳಕ್ಕೆ ಮೆರವಣಿಯೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಸೋಮನಾಥ ನಗರ ಹಿತರಕ್ಷಣೆ ಸಮಿತಿ ಮುಖಂಡ ಹನುಮಂತಪ್ಪ ವೆಂಕಟಾಪುರ, ಹೈಕೋರ್ಟ್ ಆದೇಶದಂತೆ ನೀರಾವರಿ ನಿಗಮದ ಅಧಿಕಾರಿಗಳು 30ಕ್ಕೂ ಹೆಚ್ಚು ವರ್ಷಗಳಿಂದ ವಾಸ ಮಾಡುತ್ತಿರುವರನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ. ಆದರೆ, ನಾವುಗಳು ಯಾವುದೇ ಕಾರಣಕ್ಕೂ ಈ ಜಾಗ ಬಿಟ್ಟು ಕೊಡುವುದಿಲ್ಲ. ಸರ್ಕಾರ ನಮಗೆ ಇದೇ ಜಾಗದ ಹಕ್ಕು ಪತ್ರ ಕೊಡಬೇಕು. ಒಂದು ವೇಳೆ ಕೊಡದಿದ್ದರೆ ತಹಸೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

    ತಹಸೀಲ್ದಾರ್ ಕವಿತಾ ಆರ್.ಗೆ ಮನವಿ ಸಲ್ಲಿಸಿದರು. ಮುಖಂಡರಾದ ಮಲ್ಲಯ್ಯ ಬಳ್ಳಾ, ಮೌನೇಶ ನಾಯಕ, ರಾಜು ಟೇಲರ್, ಪುರಸಭೆ ಸದಸ್ಯರಾದ ಮಲ್ಲಯ್ಯ ಅಂಬಾಡಿ ಮಾತನಾಡಿದರು. ಸುರೇಶ ಹರಸುರು, ಚೇತನ ಪಾಟೀಲ್, ದುರ್ಗಾರಾಜ ವಟಗಲ್, ಸಿದ್ದು ಮುರಾರಿ ಸೇರಿದಂತೆ ನೂರಾರು ಮಹಿಳೆಯರು ಇದ್ದರು. ಪ್ರತಿಭಟನಾ ಸ್ಥಳಕ್ಕೆ ಹಾಲಿ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭೇಟಿ ನೀಡಿ ಬೆಂಬಲ ಸೂಚಿಸಿದರು. ನೀರಾವರಿ ನಿಗಮದ ಅಧಿಕಾರಿ ಕೆ.ಮಲ್ಲಯ್ಯ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಇದ್ದರು.

    ಸರ್ವೇ ಮಾಡದಿರಿ
    ನೀರಾವರಿ ನಿಗಮಕ್ಕೆ ಸೇರಿದ ಸೋಮನಾಥ ನಗರದಲ್ಲಿ ಯಾವುದೇ ಸರ್ವೇ ಕಾರ್ಯ ಮಾಡದಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆ ಶಾಸಕ ಬಸನಗೌಡ ತುರ್ವಿಹಾಳ ಸೂಚಿಸಿದರು. 30 ವರ್ಷಗಳಿಂದ ವಾಸಿಸುತ್ತಿರುವ ಬಡ ಕೂಲಿಕಾರರ ಕುಟುಂಬಗಳು ವಾಸಿಸುತ್ತಿವೆ. ಈಗಿರುವ ಜಾಗದಲ್ಲಿ ಹಕ್ಕು ಪತ್ರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

    ಸೋಮನಾಥ ನಗರದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರ ಕೊಡಿಸಲು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುವೆ. ಈ ವಿಷಯದಲ್ಲಿ ನಾವ್ಯಾರು ರಾಜಕೀಯ ಮಾಡುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಬಗೆಹರಿಸಿ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.
    | ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts