More

    ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ – ಸಂಸದ ಸಂಗಣ್ಣ ಕರಡಿ

    ಮಸ್ಕಿ: ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಆದ್ದರಿಂದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.

    ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ತಾಲೂಕು ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಜಂಟಿಯಾಗಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ರಾಜ್ಯದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದರು. ಸಿಂದನೂರಿನ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಡಿಮೆ ಶುಲ್ಕ ಪಡೆದುಕೊಂಡು ಹೆಚ್ಚಿನ ಶಿಕ್ಷಣ ನೀಡುವಲ್ಲಿ ಮುತುವರ್ಜಿ ವಹಿಸುತ್ತಿವೆ. ಶಿಕ್ಷಣ ಸಂಸ್ಥೆಗಳಿಗೆ, ಶಿಕ್ಷಕರಿಗೆ ಅನುದಾನ ನೀಡುವಂತೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸುವೆ ಎಂದರು.

    ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ತಿಮ್ಮಾಪುರದ ಮಹಾಂತ ಸ್ವಾಮೀಜಿ, ಅಂಕಲಿಮಠದ ಸ್ವಾಮೀಜಿ, ಕೆಪಿಸಿಸಿ ಎಸ್ಟಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದನಗೌಡ ತುರ್ವಿಹಾಳ, ಅಮರೇಗೌಡ ವಿರುಪಾಪೂರ, ಮಹಾದೇವಪ್ಪಗೌಡ ಪೋಲಿಸ ಪಾಟೀಲ್, ಡಾ.ಶಿವಶರಣಪ್ಪ ಇತ್ಲಿ, ಖಾಸಗಿ ಶಿಕ್ಷಣ ಸಂಸ್ಥೆಗಳ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ನಾಯಿನೇಗಲಿ, ಕಾರ್ಯದರ್ಶಿ ಸಿದ್ದರಾಮಯ್ಯ ಗಡ್ಡಿಮಠ, ಪ್ರಕಾಶ ದಾರಿವಾಲ, ಪ್ರಭಾರಿ ಶಿಕ್ಷಣಾಧಿಕಾರಿ ಬಸ್ಸಪ್ಪ ತನಿಖೆದಾರ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶೆಟ್ಟಿ, ಸಿ.ಎ ಮೇಟಿ ಇದ್ದರು.
    ತಾಲೂಕಿನ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts