More

    ಬಡವರ ಕಷ್ಟಗಳಿಗೆ ಸ್ಪಂದಿಸಿ ಜನರ ಜೊತೆಗೆ ನಿಲ್ಲಲಿದೆ ಜೆಡಿಎಸ್ – ತಾಲೂಕು ಅಧ್ಯಕ್ಷ ಬಸವರಾಜ್ ನಾಡಗೌಡ

    ಮಸ್ಕಿ: ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ರೈತರನ್ನು ನೀರಾವರಿಯಿಂದ ವಂಚಿತರನ್ನಾಗಿ ಮಾಡಿವೆ. ರಾಜ್ಯದ ಜನರು ಇವರನ್ನು ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ಪಕ್ಷದ ಸಿಂಧನೂರು ತಾಲೂಕು ಅಧ್ಯಕ್ಷ ಬಸವರಾಜ್ ನಾಡಗೌಡ ಹೇಳಿದರು.

    ಮಸ್ಕಿಯ ಬಸವೇಶ್ವರ ನಗರದಲ್ಲಿ ಜೆಡಿಎಸ್ ಗುರುವಾರ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ಈವರೆಗೆ ಆಡಳಿತ ನಡೆಸಿರುವ ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ರೈತರ ಹಾಗೂ ಬಡವರ ಹಿತ ಬೇಕಾಗಿಲ್ಲ. ಅವರು ಕೇವಲ ಮತ ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರು. ಜೆಡಿಎಸ್ ಪಕ್ಷ ಈಗ ರಾಜ್ಯವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವುದಕ್ಕೆ ಪಣ ತೊಟ್ಟಿದ್ದು, ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬಂದು ರೈತರ ಹಾಗೂ ಬಡವರ ಕಷ್ಟಗಳಿಗೆ ಸ್ಪಂದಿಸಿ ಜನರ ಜೊತೆಗೆ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜೆಡಿಎಸ್ ಪಕ್ಷದ ಮುಖಂಡ ರಾಘವೇಂದ್ರ ನಾಯಕ ಬಳಗಾನೂರು ಮಾತನಾಡಿ, ಬರುವ ವಿಧಾಸಭೆ ಚುನಾವಣೆಯಲ್ಲಿ ಜನರು ರಾಜ್ಯದ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆ ಪೂರ್ಣಗೊಳಿಸಲು ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಜನತಾ ಜಲಧಾರೆ ರಥದ ಮೆರವಣಿಗೆ ಜರುಗಿತು. ಮುಖಂಡರಾದ ಮಲ್ಲಿಕಾರ್ಜುನ ಭಾವಿಕಟ್ಟಿ, ಬಸವರಾಜ ಜಾಲವಾಡಗಿ, ಬಸವರಾಜ್, ಯಮನೂರ ನಾಯಕ, ಸಿಕಂದರ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts