ಮಸ್ಕಿ: ಪಟ್ಟಣದ 5ನೇ ವಾರ್ಡ್‌ನಲ್ಲಿ ಬಿಜೆಪಿ ಮಂಡಲ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಬೂತ್ ವಿಜಯ ಅಭಿಯಾನಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಚಾಲನೆ ನೀಡಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರ ಜನ ಕಲ್ಯಾಣಕ್ಕಾಗಿ ಹಲವು ಯೋಜನೆ ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಮನದಟ್ಟು ಮಾಡುವ ಮೂಲಕ ಜನರ ಬಳಿ ನಿರಂತರ ಸಂಪರ್ಕ ಹೊಂದಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಕೆಲಸ ಮಾಡಬೇಕೆಂದು ತಿಳಿಸಿದರು.