More

    ಮಸ್ಕಿ ಜಲಾಶಯ ಭರ್ತಿ; 500 ಕ್ಯೂಸೆಕ್ ನೀರು ಹಳ್ಳಕ್ಕೆ

    ಮಸ್ಕಿ: ತಾಲೂಕಿನ ಮಾರಲದಿನ್ನಿ ಸಮೀಪದ 0.5 ಟಿಎಂಸಿ ಅಡಿ (29 ಅಡಿ) ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಭರ್ತಿಯಾಗಿದೆ.
    ಮಳೆಯಿಂದಾಗಿ ಕಿರು ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದಾಗಿ ನಾಲ್ಕು ಗೇಟ್‌ಗಳನ್ನು ತೆರೆದು ಜಲಾಶಯದಿಂದ 500 ಕ್ಯೂಸೆಕ್ ನೀರನ್ನು ಹಳ್ಳಕ್ಕೆ ಹರಿಸಲಾಗುತ್ತಿದೆ. ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ತಾಲೂಕು ಆಡಳಿತ ಹಾಗೂ ಜಲಾಶಯದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಗುರುವಾರ ರಾತ್ರಿ ಜಲಾಶಯದಲ್ಲಿ ನೀರಿನ ಮಟ್ಟ 25 ಅಡಿ ಇತ್ತು. ಶುಕ್ರವಾರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಭರ್ತಿ ಬಗ್ಗೆ ಹಳ್ಳದ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಜಲಾಶಯದ ಇಂಜಿನಿಯರ್ ದಾವೂದ್ ತಿಳಿಸಿದ್ದಾರೆ.

    ಬರೀದಾಗಿದ್ದ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗುವ ಮೂಲಕ ದಾಖಲೆ ನಿರ್ಮಿಸಿದೆ. ಶುಕ್ರವಾರ ಬೆಳಗ್ಗೆಯಿಂದ ತಾಲೂಕಿನಾದ್ಯಂತ ಮಳೆ ಸುರಿಯಲಾರಂಭಿಸಿದೆ. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಜನರು ಮನೆಯಿಂದ ಹೊರ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಲಾಪುರ-ಕನ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.

    ಪಟ್ಟಣದಲ್ಲಿ ರಸ್ತೆಗಳು ಹಾಗೂ ಚರಂಡಿಗಳು ತುಂಬಿ ಹರಿಯುತ್ತಿವೆ. ಸೋಮನಾಥ ನಗರ, ವಾಲ್ಮೀಕಿ ನಗರ, ಗಾಂಧಿ ನಗರದ ಪ್ರಮುಖ ಬಡಾವಣೆಗಳು, ರಾಮಕೃಷ್ಣ ಕಾಲನಿ ಸೇರಿದಂತೆ ವಿವಿಧೆಡೆ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts