More

    ಬಳಗಾನೂರಿನ ಇಬ್ಬರು ವಿದ್ಯಾರ್ಥಿಗಳಿಗೆ ಕರೊನಾ

    ಮಸ್ಕಿ: ತಾಲೂಕಿನ ಬಳಗಾನೂರು ಖಾಸಗಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗುರುವಾರ ಕರೊನಾ ದೃಢಪಟ್ಟಿದೆ ಎಂದು ತಹಸೀಲ್ದಾರ್ ಆರ್. ಕವಿತಾ ತಿಳಿಸಿದ್ದಾರೆ.

    ಶುಕ್ರವಾರ ಶಾಲೆಗೆ ಭೇಟಿ ನೀಡಿ ಸಭೆ ನಡೆಸಿದ ಅವರು, ಕರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ಮಾಸ್ಕ್ ಧರಿಸದ ಹಾಗೂ ದೈಹಿಕ ಅಂತರ ಪಾಲಿಸದವರಿಗೆ ದಂಡ ವಿಧಿಸುವಂತೆ ಪಪಂ ಅಧಿಕಾರಿಗಳಿಗೆ ಸೂಚಿಸಿದರು. ಸೋಂಕಿತ ವಿದ್ಯಾರ್ಥಿಗಳನ್ನು ಹೋಂ ಐಸೋಲೇಶನ್‌ಲ್ಲಿರಿಸಿ ಅವರ ಪ್ರಥಮ ಹಾಗೂ ದ್ವೀತಿಯ ಸಂಪರ್ಕಿತರನ್ನು ಪತ್ತೆ ಮಾಡಿ ಕರೊನಾ ಪರೀಕ್ಷೆ ಮಾಡುವಂತೆ ವೈದ್ಯಾಧಿಕಾರಿ ದೌಲಸಾಬ್‌ಗೆ ಆದೇಶಿಸಿದರು.

    ಖಾಸಗಿ ಪ್ರೌಢಶಾಲೆ ವಿದ್ಯಾರ್ಥಿಗಳಲ್ಲಿ ಕರೊನಾ ದೃಢಪಟ್ಟ ಕಾರಣ ಶಾಲೆಯ 200 ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಪಾಲಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಪ್ರಮಾಣದ ಪರೀಕ್ಷೆ ಮಾಡಲಾಗುವುದು. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಬಳಗಾನೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ದೌಲಸಾಬ್ ಕೋರಿದರು. ಶಾಲೆ ಕೊಠಡಿ ಹಾಗೂ ಪಟ್ಟಣದಲ್ಲಿ ಮುಂಜಾಗ್ರತೆಯಾಗಿ ಸ್ಯಾನಿಟೈಸ್ ಮಾಡಲಾಗಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ತಹಸೀಲ್ದಾರ್ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts