ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವಿಲ್ಲ – ಮಸ್ಕಿಯಲ್ಲಿ ಸಂಸದ ಸಂಗಣ್ಣ ಕರಡಿ

ಮಸ್ಕಿ: ರಾಜ್ಯದ ಸಮ್ಮಿಶ್ರ ಸರ್ಕಾರ ನಾಮಕಾವಾಸ್ಥೆಯಾಗಿದ್ದು, ಅವರವರೆ ಜಗಳವಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಭವಿಷ್ಯವಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಘಟಕ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಅಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದೆ ಎಂದರು.

ಮಸ್ಕಿ ಹಳ್ಳದ ಅಭಿವೃದ್ಧಿಗೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲು ಬಿಜೆಪಿಯ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರು ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್.ಬಸನಗೌಡ ತುರುವಿಹಾಳ್, ಮಸ್ಕಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಮೀನಗಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಶರಣಪ್ಪ ಜಾಡಲದಿನ್ನಿ, ಸಿ.ವಿ.ಚಂದ್ರಶೇಖರ್, ನಗರ ಘಟಕದ ಅಧ್ಯಕ್ಷ ಅಪ್ಪಾಜಿಗೌಡ, ಡಾ.ಶಿವಬಸಪ್ಪ ಲಿಂಗಸುಗೂರು, ಮಲ್ಲಪ್ಪ ಅಂಕುಶದೋಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಶಾರದ ರಾಠೋಡ್, ಶರಣಮ್ಮ ಕಾಮರೆಡ್ಡಿ ಮಾತನಾಡಿದರು.

ದಯಾನಂದ ರೆಡ್ಡಿ ಪಾಟೀಲ್ ಹುಲ್ಲೂರು, ಸಿದ್ದನಗೌಡ ಮಾಟೂರು, ತಾಪಂ ಸದಸ್ಯ ಗವಿಸಿದ್ದಪ್ಪ ಸಾಹುಕಾರ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ರಾಜೇಶ್ವರಿ ಇತರರಿದ್ದರು.

Leave a Reply

Your email address will not be published. Required fields are marked *