ಇರಾನ್‌ನ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ; ನಾಲ್ವರು ಬಲಿ: 400ಕ್ಕೂ ಅಧಿಕ ಜನರಿಗೆ ಗಾಯ! | Massive Explosion

dk - 2025-04-26T183645.323
Published on

Massive Explosion : ಇರಾನ್‌ನ ಬಂದರ್ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದ್ದು, 400ಕ್ಕೂ ಅಧಿಕ ಜನರುಗಾಯ ಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿಯಾಗಿದೆ.

ಬೆಂಕಿಯನ್ನು ನಂದಿಸಲು ಬಂದರು ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದ್ದು, "ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿರಬಹುದು ಅಥವಾ ಸಾವನ್ನಪ್ಪಿರಬಹುದು" ಎಂದು ವರದಿ ಉಲ್ಲೇಖಿಸಿದೆ.

ಮತ್ತೊಂದು ಮೂಲದ ಪ್ರಕಾರ, ಘಟನೆಯಲ್ಲಿ ನಾಲ್ಕು ಮೃತ ದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಘಟನೆಗೆ ಕಾರಣವೇನು..?

ಶಾಹಿದ್ ರಾಜೀ ಬಂದರು ವಾರ್ಫ್ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ಪಾತ್ರೆಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

''ನಾವು ಪ್ರಸ್ತುತ ಗಾಯಾಳುಗಳನ್ನು ಸ್ಥಳಾಂತರಿಸುತ್ತಿದ್ದೇವೆ ಮತ್ತು ವೈದ್ಯಕೀಯ ಕೇಂದ್ರಗಳಿಗೆ ವರ್ಗಾಯಿಸುತ್ತಿದ್ದೇವೆ" ಎಂದು ಸ್ಥಳೀಯ ಬಿಕ್ಕಟ್ಟು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net