

ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು (30) ಭಾರಿ ಸ್ಫೋಟ ಸಂಭವಿಸಿದ್ದು, ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿಯಾಕ್ಟರ್ ಸ್ಫೋಟದಿಂದ ಈ ದುರಂತ ಸಂಭವಿಸಿದ್ದು, ಕೆಲಸದ ವೇಳೆಯೇ ದುರಂತ ಸಂಭವಿಸಿ ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟಕ್ಕೆ ಕಾರಣವೇನೆಂದು ತನಿಖೆ ಮಾಡಲಾಗುತ್ತದೆ. ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಆವರಿಸಿದ್ದು, ಸಾವು ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
(ಏಜೆನ್ಸೀಸ್)
ಪಶಮೈಲಾರಂನಲ್ಲಿರುವ ಈ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಫೋಟದ ಪರಿಣಾಮ ಫ್ಯಾಕ್ಟರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿತ್ತು. ಹಲವಾರು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ.ಇನ್ನೂ ಕಾರ್ಖಾನೆಯ ಆವರಣದೊಳಗೆ ಸಿಲುಕಿರುವವರನ್ನು ರಕ್ಷಿಸಲು ತುರ್ತು ತಂಡಗಳು ಕೆಲಸ ಆರಂಭಿಸಿವೆ.