

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಅಜಾದ್ಪುರ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್ಪುರ ಮಂಡಿಯಲ್ಲಿ ಶೆಡ್ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.
ಸಂಜೆ 5:20ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, 11ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್ ಮಾರುಕಟ್ಟೆಯ ಗೇಟ್ ನಂ. 1ರ ಬಳಿ ಒರುವ ಟೊಮ್ಯಾಟೋ ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ ಆವರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.