More

    ಕಾರ್ಖಾನೆಗಳ ವಿರುದ್ಧ ಬೃಹತ್ ಪ್ರತಿಭಟನೆ ನಾಳೆ

    ಹುಮನಾಬಾದ್: ಪರವಾನಗಿ ಇಲ್ಲದೆ ಹಾಗೂ ಸರ್ಕಾರದ ನಿಯಮಗಳನ್ನು ಉಲಂಘಿಸಿ ನಡೆಸುತ್ತಿರುವ ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ವಿರುದ್ಧ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ರಾಜಶೇಖರ ಪಾಟೀlಲ್ ತಿಳಿಸಿದರು.

    ಪಟ್ಟಣದಲ್ಲಿರುವ ಗೃಹ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸೋಮವಾರ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹೊರವಲಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕಾರ್ಖಾನೆಗಳು ಸುತ್ತಮುತ್ತಲಿನ ಗ್ರಾಮಸ್ಥರ ಜೀವಕ್ಕೆ ಕುತ್ತಾಗಿ ಪರಿಣಮಿಸಿವೆ. ಇತ್ತೀಚೆಗೆ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಕಾರ್ಖಾನೆಗೆ ಬೀದರ್ ಕೈಗಾರಿಕಾ ಪ್ರದೇಶದಲ್ಲಿ ನಡೆಸಲು ಅನುಮತಿ ಇದೆ. ಆದರೆ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ರಾಜಾರೋಷವಾಗಿ ನಡೆಸಲಾಗುತ್ತಿದೆ. ಇಂತಹ ಕೈಗಾರಿಕೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.


    ಕೈಗಾರಿಕಾ ಘಟಕಗಳಿಗೆ ಅನುಮತಿ ಇಲ್ಲದೆ ಅನಧಿಕೃತವಾಗಿ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮತ್ತು ಅವರ ಸಹೋದರರು ಹಣ ವಸೂಲಿ ಮಾಡುತ್ತಿದ್ದಾರೆ. ಜತೆಗೆ ಕಾರ್ಖಾನೆಗಳಿಂದ ಹೊರಬರುವ ಇದ್ದಿಲು (ಕೊಳಸೆ) ತಮ್ಮ ಜಮೀನಿನಲ್ಲಿ ಸಂಗ್ರಹಿಸಿ ವ್ಯಾಪಾರ ಮಾಡುತ್ತಿದ್ದಾರೆ. ಹೀಗಾಗಿ ಶಾಸಕರ ದುರಾಡಳಿತ ಮತ್ತು ಕಾರ್ಖಾನೆಗಳ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದು ಕೋರಿದರು.

    ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲï, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್‌ಮಿಯಾ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಮಾಣಿಕನಗರ ಗ್ರಾಪಂ ಅಧ್ಯಕ್ಷೆ ಪಂಚಶೀಲಾ ಹೆಗಣಿ, ಧುಮ್ಮನಸೂರ ಗ್ರಾಪಂ ಅಧ್ಯಕ್ಷ ವೀರಪ್ಪ, ಪ್ರಮುಖರಾದ ಶ್ರೀಮಂತ ಪಾಟೀಲ್, ದತ್ತಕುಮಾರ ಚಿದ್ರಿ, ಮಹಾಂತಯ್ಯ ತೀರ್ಥಾ, ಸುರೇಶ ಘಾಂಗ್ರೆ, ಮಲ್ಲಿಕಾರ್ಜುನ ಶರ್ಮಾ, ಮಲ್ಲಿಕಾರ್ಜುನ ಪ್ರಭಾ, ಮಲ್ಲಿಕಾರ್ಜುನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts