More

    ಎಬಿವಿಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    ವಿಜಯಪುರ: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

    ನಗರದ ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಶಿಕ್ಷಣ ಸಚಿವರ ವಿರುದ್ಧ ಘೋಷಣೆ ಮೊಳಗಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಖಾಸಗಿ ಆಡಿಯೋ ಕಂಪನಿಯ ವ್ಯವಸ್ಥಾಪಕರಾಗಿದ್ದ ಮಧು ಬಂಗಾರಪ್ಪನವರು 2011 ರಲ್ಲಿ ರಾಜೇಶ ಎಕ್ಸಪೋರ್ಟ್‌ಗೆ ನೀಡಿದ್ದ 6.6 ಕೋಟಿ ರೂ.ಮೊತ್ತದ ಚೆಕ್ ಬೌನ್ಸ್ ಆಗಿದೆ. ಈ ಹಿನ್ನೆಲೆ ಮಧು ಬಂಗಾರಪ್ಪ ವಿರುದ್ದ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ.ದಂಡ ವಿಧಿಸಿ 6 ತಿಂಗಳ ಒಳಗೆ ದಂಡ ಪಾವತಿಸುವಂತೆ ಸೂಚಿಸಿದೆ. ಇಲ್ಲದೇ ಹೋದರೆ ಆರು ತಿಂಗಳ ಸೆರೆವಾಸ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ. ಈ ರೀತಿ ಕಳಂಕ ಹೊತ್ತವರು ಶಿಕ್ಷಣ ಸಚಿವರಾಗಿ ಮುಂದುವರೆಯುವುದು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕೆ. ಕೂಡಲೇ ರಾಜ್ಯ ಸರ್ಕಾರ ಸಚಿವ ಮಧು ಬಂಗಾರಪ್ಪ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.

    ನಗರ ಕಾರ್ಯದರ್ಶಿ ಕವಿತಾ ಬಿರಾದಾರ, ಸಾಮಾಜಿಕ ಜಾಲತಾಣದ ಸಹ ಪ್ರಮುಖ ಸಿದ್ದು ಪತ್ತಾರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಶಿವನಗೌಡ ಬಿರಾದಾರ, ನಗರ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ಗೌತಮ ಶಿಂಧೆ, ಸಂತೋಷ ಹಿರೇಮಠ, ಅಭಿಷೇಕ ಬಿರಾದಾರ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts